ಮಡಿಕೇರಿ: ವಿಜಯದಶಮಿ ಹಬ್ಬದ ಅಂಗವಾಗಿ ಮಡಿಕೇರಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವತಿಯಿಂದ ಪಥಸಂಚಲನ ನಡೆಯಿತು.
ನಗರದ ಮುತ್ತಪ್ಪ ದೇವಸ್ಥಾನದ ಬಳಿಯಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗಾಂಧಿ ಮೈದಾನ ತಲುಪಿತು.
ನೂರಾರು ಸ್ವಯಂಸೇವಕರು ಸಂಘದ ಧ್ವಜ ಹಾಗೂ ದಂಡ ಹಿಡಿದು, ಒಂದೇ ರೀತಿಯ ಸಮವಸ್ತ್ರದಲ್ಲಿ ಶಿಸ್ತಿನಿಂದ ಹೆಜ್ಜೆ ಹಾಕಿದರು. ಪಥಸಂಚಲನ ಸಾರ್ವಜನಿಕರ ಗಮನ ಸೆಳೆಯಿತು.
ಇನ್ನು ಪಥಸಂಚಲನದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

