ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳಿಗೆ (PG) ಬ್ರೇಕ್ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ.
ನಗರದಲ್ಲಿರುವ ಒಟ್ಟು 5,480 ಪಿಜಿಗಳ ಪೈಕಿ 3,597 ಪಿಜಿಗಳು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿ ಹೊರಬಿದ್ದಿದೆ. ಹೀಗಾಗಿ, ಅನಧಿಕೃತ ಪಿಜಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಅನಧಿಕೃತ ಪಿಜಿಗಳಿಗೆ ಹೊಸ ರೂಲ್ಸ್
ಜಿಬಿಎ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, 2025ರಲ್ಲಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ ಸುತ್ತೋಲೆಯ ಅನ್ವಯ ಕೆಲವು ನಿಯಮಗಳನ್ನು ಪಾಲಿಸದ ಪಿಜಿಗಳಿಗೆ ವ್ಯಾಪಾರ ಪರವಾನಗಿ ನೀಡಲು ಸಾಧ್ಯವಿಲ್ಲ.
40 ಅಡಿಗಿಂತ ಕಡಿಮೆ ಅಗಲದ ರಸ್ತೆಗಳಲ್ಲಿರುವ ಪಿಜಿಗಳು, ಕಟ್ಟಡದ ಅನುಮೋದಿತ ನಕ್ಷೆಯ ನಿಯಮಗಳನ್ನು ಉಲ್ಲಂಘಿಸಿರುವ ಕಟ್ಟಡಗಳು ಹಾಗೂ ವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳು ಈ ನಿಯಮಗಳ ವ್ಯಾಪ್ತಿಗೆ ಬರುತ್ತವೆ. ಜೊತೆಗೆ, ನೆಲಮಾಳಿಗೆಯಲ್ಲಿ ಅಡುಗೆಮನೆ ಹೊಂದಿರುವ ಪಿಜಿಗಳಿಗೂ ಪರವಾನಗಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – ತಪ್ಪಿದ ಭಾರೀ ಅನಾಹುತ
ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುವ ಪಿಜಿ ಕಟ್ಟಡಗಳು ಅಲ್ಲಿ ವಾಸಿಸುವವರ ಸುರಕ್ಷತೆಗೆ ಅಪಾಯ ಉಂಟುಮಾಡಬಹುದು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪಿಜಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದೆ.ಇದನ್ನೂ ಓದಿ: ವಿಜಯದಶಮಿ ಪ್ರಯುಕ್ತ ಮಡಿಕೇರಿಯಲ್ಲಿ ಆರ್ಎಸ್ಎಸ್ ಪಥಸಂಚಲನ
