ಬೆಂಗಳೂರು: ನಗರದಲ್ಲಿ ತಡರಾತ್ರಿವರೆಗೂ ಜಿಟಿಜಿಟಿ (Weather) ಮಳೆಯಾಗಿದೆ. ಮಲ್ಲೇಶ್ವರಂ, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ.
ಕೆಲವೆಡೆ ವಾಹನ ಸವಾರರು ಪರದಾಡಿದ್ದಾರೆ. ಇಂದು ಬೆಳಗ್ಗೆಯೂ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ. ಈ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯೂ ಇದೆ ಎಂದು ತಿಳಿಸಲಾಗಿದೆ.
ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು, ಪುದುಚೇರಿ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಿಗೆ ಅಲರ್ಟ್
ಇಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಗದಗ | ಬೆಳೆ ಮಾರಾಟ ವಿಷಯಕ್ಕೆ ಸ್ನೇಹಿತನಿಗೆ ವಂಚಿಸಿ ಕೊಲೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲೂ ಮಳೆಯ ಮುನ್ಸೂಚನೆ ಇರುವುದರಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆ ಮುಂದುವರಿಯುವ ಸಾಧ್ಯತೆಯಿದೆ.ಇದನ್ನೂ ಓದಿ: ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಗದಗ ಕೆಆರ್ಐಡಿಎಲ್ ಎಇಇ 40 ದಿನಗಳ ಬಳಿಕ ಮುಂಬೈನಲ್ಲಿ ಪತ್ತೆ
