ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಕುಶಾಲನಗರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಿಂದಾಗಿ ಮೂರು ಮನೆ ಹಾಗೂ ಕೊಟ್ಟಿಗೆಗೆ ಹಾನಿಯಾಗಿರುವ ಘಟನೆಗಳು ವರದಿಯಾಗಿವೆ. ನಿರಂತರ ಮಳೆಯಿಂದ ಗ್ರಾಮೀಣ ಭಾಗದ ನಿವಾಸಿಗಳಲ್ಲಿ ಆತಂಕ ಮೂಡಿದೆ.
ಕುಶಾಲನಗರ ತಾಲ್ಲೂಕಿನ ಚಿಕ್ಕ ಅಳುವಾರ ಗ್ರಾಮದ ನಿವಾಸಿ ವಿಜಯಕುಮಾರ್ ಟಿ.ವೈ. ಅವರ ಮನೆಯ ಗೋಡೆಯ ಒಂದು ಭಾಗ ಹಾನಿಗೊಳಗಾಗಿದೆ. ರಾತ್ರಿ ಸುರಿದ ನಿರಂತರ ಮಳೆಯಿಂದಾಗಿ ಗೋಡೆಯ ಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ಕೂಡುಮಂಗಳೂರು ಗ್ರಾಮದ ಜಯಲಕ್ಷ್ಮಿ ಅವರ ಮನೆಯ ಮೇಲ್ಛಾವಣಿಗೂ ಮಳೆಯಿಂದ ಹಾನಿಯಾಗಿದೆ. ಇದೇ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ನವೀನ್ ಅವರ ಕೊಟ್ಟಿಗೆಗೂ ಹಾನಿಯಾಗಿದೆ ಎಂದು ವರದಿಯಾಗಿದೆ.ಇದನ್ನೂ ಓದಿ: ಶಿವಮೊಗ್ಗ ದಸರಾ ಅವಘಡದಲ್ಲಿ ಹಾನಿಯಾಗಿದ್ದ ಅಂಬಾರಿ, ವಿಗ್ರಹವನ್ನು ಪರಿಶೀಲಿಸಿದ ಸಚಿವ ಮಧು ಬಂಗಾರಪ್ಪ
ಮಳೆಯಿಂದ ಮನೆಗಳಿಗೆ ಹಾನಿಯಾಗಿರುವ ಕುರಿತು ಮಾಹಿತಿ ಪಡೆದ ಕುಶಾಲನಗರ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಾನಿಯ ವಿವರಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳ ಮೂಲಕ ವರದಿ ಸಲ್ಲಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳು ಹಾಗೂ ಇತರ ಕಟ್ಟಡಗಳಿಗೆ ಹಾನಿಯಾಗುವ ಆತಂಕ ಎದುರಾಗಿದೆ. ಹೀಗಾಗಿ ನಿವಾಸಿಗಳು ಎಚ್ಚರಿಕೆಯಿಂದ ಇರುವ ಅಗತ್ಯವಿದೆ.ಇದನ್ನೂ ಓದಿ: Public TV Impact | KSOU ಶಿವಮೊಗ್ಗ ಪ್ರಾದೇಶಿಕ ಕಚೇರಿಯ ನಿರ್ದೇಶಕ ಅಮಾನತು
