ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ(Rain) ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ನಿನ್ನೆ 9,475 ಕ್ಯೂಸೆಕ್ನಷ್ಟಿದ್ದ ಜಲಾಶಯದ ಒಳಹರಿವು, ಇಂದು 11,864 ಕ್ಯೂಸೆಕ್ಗೆ ತಲುಪಿದೆ. ಜಲಾನಯನ(Cauvery River Basin) ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಡ್ಯಾಂ ನೀರಿನ ಮಟ್ಟವು 103.96 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 26.074 ಟಿಎಂಸಿ ನೀರು ಸಂಗ್ರಹವಾಗಿದ್ದು, ನದಿಗೆ 1,996 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯಕ್ಕೆ ನೀರಿನ ಹರಿವು ಉತ್ತಮವಾಗಿರುವುದರಿಂದ ಅನ್ನದಾತರ ಮುಖದಲ್ಲಿ ಹರ್ಷ ಮೂಡಿದೆ.
