ಚಿಕ್ಕಬಳ್ಳಾಪುರ: ಮದುವೆಯಾಗಿ ಕೆಲವೇ ತಿಂಗಳು ಕಳೆದಿತ್ತು. ನೂರಾರು ಕನಸುಗಳೊಂದಿಗೆ ಹೊಸ ಜೀವನ ಆರಂಭಿಸಿದ್ದ ನವದಂಪತಿಯ ಬದುಕಿಗೆ ಭೀಕರ ರಸ್ತೆ ಅಪಘಾತವೊಂದು ಅಂತ್ಯ ಹಾಡಿದೆ. ಇಕೋ ಕಾರು ಹಾಗೂ ಎಲೆಕ್ಟ್ರಿಕ್ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ನವದಂಪತಿ (Newlywed Couple) ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ – ಬೆಂಗಳೂರು ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಚಿಂತಾಮಣಿ (Chintamani) ನಗರದ ಎಂ.ಜಿ. ರಸ್ತೆಯ ಶ್ರೀನಿವಾಸ್ ಜ್ಯುವೆಲ್ಸ್ ಬಳಿಯ ನಿವಾಸಿಗಳಾದ ಷನ್ಮುಖ (27) ಹಾಗೂ ಅವರ ಪತ್ನಿ ಮಿಥುಲ (24) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಅಮಿತ್ ಶಾ ವಿರುದ್ಧ ಬೆಂಗಳೂರಿನಲ್ಲಿ ಆಕ್ಷೇಪಾರ್ಹ ಹೇಳಿಕೆ – ರಾಹುಲ್ ಖುಲಾಸೆ
ಕೆಲವೇ ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಇದೀಗ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವುದು ಕುಟುಂಬಸ್ಥರಿಗೆ ಆಘಾತ ತಂದಿದೆ. ಇದನ್ನೂ ಓದಿ: ಒಂಟಿ ವೃದ್ಧೆಯ ಬರ್ಬರ ಹತ್ಯೆ – ಚಿನ್ನಾಭರಣ ದರೋಡೆ
ಚಿಂತಾಮಣಿ-ಬೆಂಗಳೂರು ರಸ್ತೆಯಲ್ಲಿ ನವದಂಪತಿ ಎಲೆಕ್ಟ್ರಿಕ್ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಇಕೋ ಕಾರು ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬೈಕ್ ಎರಡೂ ತೀವ್ರವಾಗಿ ಜಖಂಗೊಂಡಿವೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಷನ್ಮುಖ ಹಾಗೂ ಮಿಥುಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ರಾಹುಲ್ ಬೆಂಗಾವಲು ಪಡೆಯ 5 ವಾಹನಗಳು, ಅಂಬುಲೆನ್ಸ್ ಡಿಕ್ಕಿ – ರಾಗಾ ಸುರಕ್ಷಿತ
ಇದೇ ಅಪಘಾತದಲ್ಲಿ ಇಕೋ ಕಾರಿನಲ್ಲಿದ್ದ ಸೂರಜ್, ಎಂ.ಎಲ್.ಕುಮಾರ್ ಹಾಗೂ ಅತುಲಾ ಎಂಬುವವರಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಸೌಜನ್ಯ ಪ್ರಕರಣ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗೆ ಎಸ್ಐಟಿ ಬುಲಾವ್
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಧನ್ವೀರ್ ವಿರುದ್ಧ ಫಿಲ್ಮ್ ಚೇಂಬರ್ಗೆ ದೂರು ನೀಡಲಿದ್ದಾರೆ ಝೈದ್ ಖಾನ್
ಮದುವೆಯಾಗಿ ಕೆಲವೇ ತಿಂಗಳು ಕಳೆಯುವಷ್ಟರಲ್ಲಿ ನವದಂಪತಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದು, ಎರಡು ಕುಟುಂಬಗಳಲ್ಲಿ ಶೋಕ ಮಡುಗಟ್ಟಿದೆ. ಹೊಸ ಬದುಕಿನ ಕನಸು ಕಂಡಿದ್ದ ಜೋಡಿಯ ಜೀವನಯಾನ ರಸ್ತೆಯಲ್ಲೇ ದುರಂತ ಅಂತ್ಯ ಕಂಡಿದೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್ಎಸ್ ಡ್ಯಾಂ ಒಳಹರಿವು ಏರಿಕೆ
