ಬೆಂಗಳೂರು: ನಗರದ ಗಂಗಮ್ಮನಗುಡಿಯ ಕಮ್ಮಗೊಂಡನಹಳ್ಳಿಯಲ್ಲಿ ಗ್ಯಾಸ್ ರಿಫಿಲ್ಲಿಂಗ್ ಅಂಗಡಿಯಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿತ್ತು. ಎರಡು ದಿನಗಳ ಬಳಿಕ ಘಟನೆಯಲ್ಲಿ ದಂಪತಿ ದಾರುಣವಾಗಿ ಉಸಿರುಗಟ್ಟಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಮೃತರನ್ನು ನಾಗರತ್ನ ಮತ್ತು ಆಕಾಶ್ ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ರಾತ್ರಿ ಗ್ಯಾಸ್ ರಿಫಿಲ್ಲಿಂಗ್ ಅಂಗಡಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, 20ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ಗಳು ಸರಣಿ ಸ್ಪೋಟಗೊಂಡಿದ್ದವು. ತಕ್ಷಣ ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು.ಇದನ್ನೂ ಓದಿ: ನ್ಯಾಯಾಧೀಶರ ಅಪ್ರಾಪ್ತ ಮಗನಿಂದ ಅಪಘಾತ – ಜಡ್ಜ್ ವಿರುದ್ಧ ದೂರು ದಾಖಲಿಸಲು ಕೇರಳ ಹೈಕೋರ್ಟ್ ಅನುಮತಿ
ಮೊದಲಿಗೆ ಯಾವುದೇ ಅನಾಹುತ ಆಗಿಲ್ಲವೆಂದು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದರು. ಆದರೆ, ಇವತ್ತು ಬೆಂಕಿಯ ಅವಶೇಷ ತೆಗೆಯಲು ಬಂದಾಗ ಬೆಂಕಿ ಹೊತ್ತಿಕೊಂಡಿದ್ದ ಮೊದಲ ಮಹಡಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿವೆ. ದಂಪತಿಗಳಾದ ನಾಗರತ್ನ ಮತ್ತು ಆಕಾಶ್, ಬೆಂಕಿ ಹೊತ್ತಿಕೊಳ್ತಿದ್ದಂತೆ ಮೊದಲ ಮಹಡಿಗೆ ಹೋಗಿದ್ದಾರೆ. ಆದರೆ, ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಘಟನೆ ಕುರಿತು ಗಂಗಮ್ಮನಗುಡಿ ಪೊಲೀಸರು ಹಾಗೂ ಫೋರೆನ್ಸಿಕ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.ಇದನ್ನೂ ಓದಿ: ತಮಿಳುನಾಡಿನಲ್ಲಿ ಮಳೆಯಾರ್ಭಟ – ಸಿಡಿಲು ಬಡಿದು 14 ಮಂದಿ ಸಾವು
