ನವದೆಹಲಿ: ಅ.12ರಂದು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನೋಟಿಸ್ ನೀಡಿದೆ.
ಘಟನೆಯಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಬೇಕು ಮತ್ತು ಸಂತ್ರಸ್ತ ಪತ್ರಕರ್ತೆಗೆ ಪರಿಹಾರ ನೀಡಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರರಿಗೆ ನೋಟಿಸ್ ನೀಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತದಾರರ ಅಂತಿಮ ಪಟ್ಟಿ ಪ್ರಕಟ- ಬೆಂಗಳೂರಲ್ಲಿ ಅರ್ಧಕ್ಕರ್ಧ ಮತದಾರರು ಡಿಲೀಟ್
ಗರ್ಭಿಣಿ ಪತ್ರಕರ್ತೆ ಪರ ಹಿರಿಯ ವಕೀಲ ಗೌರವ್ ಭಾಟಿಯಾ ಅವರು, ಸುಪ್ರೀಂ ಕೋರ್ಟ್ ಆವರಣದಲ್ಲೇ ಮಹಿಳಾ ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಲಾಗಿದೆ ಎಂದು ವಾದಿಸಿದರು.
ಅರ್ಜಿಯಲ್ಲಿ ಏನಿದೆ?
ಪತ್ರಕರ್ತೆಯನ್ನು ಗೇಟ್ನತ್ತ ಎಷ್ಟು ಬಲವಾಗಿ ತಳ್ಳಲಾಯಿತೆಂದರೆ, ಅವರು ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದರು. ಅಲ್ಲದೇ ತಳ್ಳಾಟ ನೂಕಾಟ ನಡೆದಿದ್ದು ಜನಸಂದಣಿಯಿಂದಲ್ಲ. ಬದಲಿಗೆ ಉದ್ದೇಶಪೂರ್ವಕವಾಗಿ ಮಾಡಿದ್ದಾರೆ. ಆದರೆ ಇದೆಲ್ಲವನ್ನು ನಿಲ್ಲಿಸುವಂತೆ ಪತ್ರಕರ್ತೆ ಸ್ಪಷ್ಟವಾಗಿ ಕೇಳಿಕೊಂಡಿದ್ದರು ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಮತ್ತು ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಬೇಕು. ಸಂತ್ರಸ್ತ ಪತ್ರಕರ್ತೆಗೆ ಪರಿಹಾರ ನೀಡಬೇಕು ಎಂದು ಕೋರಿದ್ದಾರೆ.ಇದನ್ನೂ ಓದಿ: ಆಕಸ್ಮಿಕ ಬೆಂಕಿಗೆ ಗುಡಿಸಲು ಸುಟ್ಟು ಭಸ್ಮ – ಬೀದಿಗೆ ಬಂದ ದಂಪತಿ
