ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಪರಿಷತ್ಗೆ ನಡೆದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ, ಹಾಲಿ ಪರಿಷತ್ ಸದಸ್ಯ ಶಶೀಲ್ ನಮೋಶಿ (Shashil G. Namoshi) ಜಯಗಳಿಸಿದ್ದಾರೆ.
ಕಾಂಗ್ರೆಸ್ನ ಶರಣಪ್ಪ ಮಟ್ಟೂರ್ ವಿರುದ್ಧ ನಮೋಶಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
ಕಲಬುರಗಿಯಲ್ಲಿ ಎಂಎಲ್ಸಿ ಎನ್.ರವಿಕುಮಾರ್ ಮಾತನಾಡಿ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗೆ ಭರ್ಜರಿ ಜಯವಾಗಿದೆ. ರಾಜ್ಯದಲ್ಲಿ ನಡೆದ ನಾಲ್ಕು ಎಂಎಲ್ಸಿ ಚುನಾವಣೆಯಲ್ಲಿ ಸರ್ಕಾರಕ್ಕೆ ಪ್ರಜ್ಞಾವಂತ ಜನ ಪಾಠ ಕಲಿಸಿದ್ದಾರೆ. ನಮ್ಮ ರಾಜ್ಯದ ಶಿಕ್ಷಕರು ಹಾಗೂ ಪದವೀಧರರು ಡಿಕೆಶಿ ಅವರಿಗೆ ಪಾಠ ಕಲಿಸಿದ್ದಾರೆ. ಖಜಾನೆ ಖಾಲಿಯಾಗಿದೆ ಅಂತಾ ಹೇಳುವ ಡಿಕೆಶಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ. ಈ ನಾಲ್ಕು ಚುನಾವಣೆ ಫಲಿತಾಂಶ ಮುಂಬರುವ 2028ರ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.
