ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ಹಗರಣ (Online Betting Scam) ಸಂಬಂಧ ಇಡಿ ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ (Veerendra Puppy) ಮತ್ತು ಇತರರಿಗೆ ಸೇರಿದ 23.35 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಗುಲ್ಷನ್ ಖಟ್ಟರ್, ನೇಹಾ ಟಂಡನ್ಗೆ ಸೇರಿದ ಒಟ್ಟು 23.35 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರಾಸ್ತಿ ತಾತ್ಕಾಲಿಕ ಜಪ್ತಿ ಮಾಡಿದ್ದು, 13.76 ಕೋಟಿ ರೂ. ಮೌಲ್ಯದ ಚರಾಸ್ತಿ, 9.58 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ವಶಕ್ಕೆ ಪಡೆಯಲಾಗಿದೆ. ಕಿಂಗ್ 567 ಸೇರಿದಂತೆ ವಿವಿಧ ಅಕ್ರಮ ಬೆಟ್ಟಿಂಗ್ ಆಪ್ಗಳ ನಿರ್ವಹಣೆ ಆರೋಪ ಕೇಳಿಬಂದಿದ್ದು, ಆನ್ಲೈನ್ ಬೆಟ್ಟಿಂಗ್ ಮೂಲಕ ಆಟಗಾರರಿಗೆ ವಂಚಿಸಿ, ಹಣ ಸಂಗ್ರಹಿಸಲಾಗಿದೆ. ಇದನ್ನೂ ಓದಿ: ಕನ್ನಡಿಗರಿಗೆ ಕೆಲಸ ನೀಡದೇ ಉದ್ಧಟತನ – ಕೊನೆಗೂ ಕನ್ನಡಿಗರ ಕ್ಷಮೆ ಕೋರಿದ ಖಾಸಗಿ ಸಂಸ್ಥೆ
ನಕಲಿ ಕಂಪನಿಗಳು, ಮ್ಯೂಲ್ ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಲಾಗಿದ್ದು, ಹವಾಲಾ ಮತ್ತು ವಿದೇಶಿ ಹಣ ವರ್ಗಾವಣೆ ಮಾರ್ಗಗಳ ಬಳಕೆ ಮಾಡಿರೋದು ಗೊತ್ತಾಗಿದೆ. 2,300 ಕೋಟಿ ರೂ.ಗೂ ಅಧಿಕ ಅಕ್ರಮ ಹಣ ವರ್ಗಾವಣೆ ನಡೆದಿರುವುದಾಗಿ ಇಡಿ ಅಧಿಕಾರಿಗಳಿಗೆ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರೆದಿದೆ.
ಈ ಹಿಂದೆ ದೇಶದ ವಿವಿಧ ರಾಜ್ಯಗಳಲ್ಲಿ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ರು. ಪ್ರಮುಖ ಆರೋಪಿ ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ಎ ಕಾಯ್ದೆಯಡಿ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಈವರೆಗೆ 343 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ಇದನ್ನೂ ಓದಿ: MLC Elections 2026 Results: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ನ ಎ.ಪಿ.ರಂಗನಾಥ್ಗೆ ಗೆಲುವು
