ವಿಜಯಪುರ: ಶಾರ್ಟ್ ಸರ್ಕ್ಯೂಟ್ನಿಂದ ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿ (Nidagundi) ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆಬ್ಬಾಳ ಗ್ರಾಮದ ಕಮಲಪ್ಪ ಪಟ್ಟಣಶೆಟ್ಟಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿದ್ದು, ಒಟ್ಟು 5 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಫಸಲು ಇದೀಗ ಬೆಂಕಿಗಾಹುತಿಯಾಗಿದೆ. ಇದನ್ನೂ ಓದಿ: ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು – ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಡೆಡ್ಲೈನ್
ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬೆಂಕಿ ನಂದಿಸುವಷ್ಟರಲ್ಲಿ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಸಾಲ ಮಾಡಿ ಬೆಳೆದಿದ್ದ ರೈತ ಕಮಲಪ್ಪ ಅವರ ಕಬ್ಬು ಇದೀಗ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಹೆಸ್ಕಾಂ ಆಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಹೆಸ್ಕಾಂನಿಂದ ರೈತನಿಗೆ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ. ಐದು ಎಕರೆ ಜಮೀನಿನಲ್ಲಿದ್ದ ಕಬ್ಬು ಸುಟ್ಟ ಕಾರಣ ರೈತ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಇದನ್ನೂ ಓದಿ: 13 ವರ್ಷಗಳ ಬಳಿಕ ಆಟೋ ಪ್ರಯಾಣ ದರ ಹೆಚ್ಚಳ – 1.8 ಕಿ.ಮೀ.ಗೆ 50ರೂ. ನಿಗದಿಗೊಳಿಸಿದ ಸಿಎಂ ವಿಜಯ್ ಸರ್ಕಾರ
