ಹಾವೇರಿ: ಜಮೀನೊಂದರಲ್ಲಿ ಚಿರತೆ (Leopard Death) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬ್ಯಾಡಗಿ ತಾಲೂಕಿನ ಆಣೂರು ಗ್ರಾಮದಲ್ಲಿ (Haveri) ನಡೆದಿದೆ.
ಆಣೂರು ಗ್ರಾಮದ ಸುತ್ತಮುತ್ತ ಎರಡು ಚಿರತೆಗಳು ಓಡಾಡುತ್ತಿದ್ದವು ಎಂದು ಸ್ಥಳಿಯರು ತಿಳಿಸಿದ್ದಾರೆ. ಜಮೀನಿನಲ್ಲಿ ಈ ಎರಡು ಚಿರತೆಗಳ ನಡುವೆ ಕಾದಾಟ ನಡೆದಿದ್ದು, ಅದರ ಪರಿಣಾಮವಾಗಿ ಚಿರತೆ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿಗೆ ಇದೇ ಕಾರಣ ಎಂಬುದು ಇನ್ನೂ ಖಚಿತವಾಗಿಲ್ಲ.
ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್ನಿಂದ ಕಟಾವಿಗೆ ಬಂದಿದ್ದ 5 ಎಕರೆ ಕಬ್ಬು ಬೆಂಕಿಗಾಹುತಿ – ರೈತ ಕಂಗಾಲು
ಆಣೂರು ಗ್ರಾಮದ ಸುತ್ತಮುತ್ತ ಚಿರತೆಗಳ ಓಡಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಈ ಭಾಗದಲ್ಲಿ ಗಸ್ತು ತಿರುಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: KPSC ನೇಮಕಾತಿಯಲ್ಲಿ ಬಹುಕೋಟಿ ಹಗರಣ – ಮಾಜಿ ಅಧ್ಯಕ್ಷ ಶಿವಶಂಕರಪ್ಪ ಖಾತೆಗೆ ವರ್ಷದಲ್ಲಿ 10 ಕೋಟಿ
