ನವದೆಹಲಿ: ಅಬಕಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಂದ ಸುಲಿಗೆ ಮಾಡಿದ್ದ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ಶ್ರೀನಾಥ್ ಮಹಾದೇವ್ ಜೋಶಿ (Srinath Joshi) ಅವರ ನಿರೀಕ್ಷಣಾ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಮೂರು ವಾರಗಳೊಳಗೆ ಪೊಲೀಸರ ಮುಂದೆ ಶರಣಾಗುವಂತೆ ಅಧಿಕಾರಿಗೆ ಸುಪ್ರೀಂ ಸೂಚನೆ ನೀಡಿದೆ. ಜೋಶಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಅದನ್ನು ಈಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಹಿಂಸಾಚಾರದ ಮೂಲಕ ಸರ್ಕಾರ ಬೀಳಿಸಲು ಯತ್ನಿಸುವವರಿಗೆ ಸರ್ಕಾರಿ ಉದ್ಯೋಗ ಬಂದ್ – ಯೋಗಿ ಸರ್ಕಾರದ ಆದೇಶ
ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳಿಂದ ಇಂತಹ ಕೃತ್ಯ ಸಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಅಬಕಾರಿ ಸೇರಿ ಇತರೆ ಇಲಾಖೆ ಅಧಿಕಾರಿಗಳಿಂದ ಸುಲಿಗೆ ಮಾಡಿದ್ದಾರೆ. ಮಾಜಿ ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ಜೊತೆಗೂಡಿ ಸುಲಿಗೆ ಮಾಡಿದ್ದರು. ಸುಲಿಗೆ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ದರು. 13 ಕ್ರಿಪ್ಟೊ ವಾಲೆಟ್ಗಳಲ್ಲಿ ಸಂಬಂಧಿಕರ ಹೆಸರಿನಲ್ಲಿ ಹೂಡಿಕೆ ಮಾಡಲಾಗಿತ್ತು. ಇದನ್ನೂ ಓದಿ: ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ಸಾವು
