– ಪುಸ್ತಕ ಬಿಡುಗಡೆ ಮಾಡಿದ್ರೆ ರಾಜಕಾರಣದ ಬಗ್ಗೆ ಜನ ಅಸಹ್ಯ ಪಡುತ್ತಾರೆ ಎಂದ ಮಾಜಿ ಎಂಎಲ್ಸಿ
ಮೈಸೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ (Sting Operation) ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಹೊತ್ತಿನಲ್ಲಿ ಪರಿಷತ್ ಮಾಜಿ ಸದಸ್ಯ ಹೆಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ‘ಬಾಂಬೆ ಡೇಸ್’ ಪುಸ್ತಕವನ್ನು ನಾನು ಬಿಡುಗಡೆ ಮಾಡುವುದಿಲ್ಲ ಎಂದು ವಿಶ್ವನಾಥ್ (H.Vishwanath) ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಾಂಬೆ ಡೇಸ್ ಪುಸ್ತಕವನ್ನು ನಾನು ಸಂಪೂರ್ಣವಾಗಿ ಬರೆದಿದ್ದೇನೆ. ಆದರೆ, ಪ್ರಕಟ ಮಾಡದಿರಲು ನಿರ್ಧರಿಸಿದ್ದೇನೆ. ಪುಸ್ತಕ ಬಿಡುಗಡೆ ಮಾಡಿದರೆ ರಾಜಕಾರಣದ ಬಗ್ಗೆ ಜನ ಮತ್ತಷ್ಟು ಅಸಹ್ಯ ಪಟ್ಟುಕೊಳ್ಳುತ್ತಾರೆ. ಈ ಕಾರಣದಿಂದ ಬಾಂಬೆ ಡೇಸ್ ಪುಸ್ತಕ ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸ್ಟಿಂಗ್ ಮಾಡಿ ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯರನ್ನು ಇಳಿಸಲಾಗಿದೆ: ಡಿಕೆಶಿ ವಿರುದ್ಧ ರವಿಕುಮಾರ್ ಕಿಡಿ
ಈಗಲೇ ಜನ ರಾಜಕೀಯದ ಬಗ್ಗೆ ಬಹಳ ಅಸಹ್ಯ ಮಾಡಿಕೊಂಡಿದ್ದಾರೆ. ಇನ್ನಷ್ಟು ಅಸಹ್ಯ ಮಾಡಿಸುವುದಕ್ಕೆ ನನಗೆ ಇಷ್ಟ ಇಲ್ಲ ಎಂದು ವಿಶ್ವನಾಥ್ ಹೇಳಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಕಟ್ಟುಕಥೆ. ಈ ಸಂಬಂಧ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ: ಸಿದ್ದರಾಮಯ್ಯ
