– ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಆಟೋ ಸಂಚಾರ ಸ್ಥಗಿತ!
ಮಡಿಕೇರಿ: ಮಡಿಕೇರಿ ನಗರದಲ್ಲಿ ನಾಳೆ (ಶುಕ್ರವಾರ – ಅ.30) ಆಟೋ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ವಿರೋಧಿಸಿ ಆಟೋ ಮಾಲೀಕರು ಮತ್ತು ಚಾಲಕರ ಸಂಘ ಪ್ರತಿಭಟನೆಗೆ ಕರೆ ನೀಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮಡಿಕೇರಿ ನಗರಾದ್ಯಂತ ಆಟೋ ಸಂಚಾರ ಬಂದ್ ಮಾಡಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಂಘ ನಿರ್ಧರಿಸಿದೆ.
ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಆಟೋಗಳೂ ಸಂಚಾರ ನಡೆಸುವುದಿಲ್ಲ ಎಂದು ಸಂಘ ತಿಳಿಸಿದ್ದು, ಸಾರ್ವಜನಿಕರು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.
ಹೌದು. ಬೈಕ್ ಟ್ಯಾಕ್ಸಿಗಳ ಹಾವಳಿ ವಿರೋಧಿಸಿ ಮಡಿಕೇರಿ ಆಟೋ ಮಾಲೀಕರು ಮತ್ತು ಚಾಲಕರ ಸಂಘ ಪ್ರತಿಭಟನೆಗೆ ಮುಂದಾಗಿದೆ. ಈ ಹಿನ್ನೆಲೆ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಡಿಕೇರಿ ನಗರಾದ್ಯಂತ ಆಟೋ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಬೈಕ್ ಟ್ಯಾಕ್ಸಿಗಳಿಂದ ಆಟೋ ಚಾಲಕರಿಗೆ ತೊಂದರೆಯಾಗುತ್ತಿದೆ ಎಂಬ ಆಕ್ಷೇಪದ ಹಿನ್ನೆಲೆ ಸಂಘ ಈ ಪ್ರತಿಭಟನೆಗೆ ಕರೆ ನೀಡಿದೆ.
ಪ್ರತಿಭಟನೆಯ ಅಂಗವಾಗಿ ಆಟೋ ಸಂಚಾರ ಬಂದ್ ಮಾಡಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಇನ್ನು, ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಆಟೋಗಳೂ ಸಂಚಾರ ಮಾಡುವುದಿಲ್ಲ ಎಂದು ಸಂಘ ತಿಳಿಸಿದೆ. ಹೀಗಾಗಿ ಶಾಲಾ ಮಕ್ಕಳು, ಪೋಷಕರು ಸೇರಿದಂತೆ ಆಟೋಗಳನ್ನೇ ಅವಲಂಬಿಸಿರುವ ಸಾರ್ವಜನಿಕರಿಗೆ ನಾಳೆ ಸಂಚಾರದ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಒಂದು ದಿನದ ಮಟ್ಟಿಗೆ ಆಟೋ ಸಂಚಾರ ಸ್ಥಗಿತಗೊಳಿಸಿ ನಡೆಸುತ್ತಿರುವ ಈ ಪ್ರತಿಭಟನೆಗೆ ಸಾರ್ವಜನಿಕರು ಸಹಕಾರ ನೀಡುವಂತೆ ಆಟೋ ಮಾಲೀಕರು ಮತ್ತು ಚಾಲಕರ ಸಂಘ ಮನವಿ ಮಾಡಿದೆ.
ಒಟ್ಟಿನಲ್ಲಿ, ರಾಪಿಡೋ ಬೈಕ್ ಟ್ಯಾಕ್ಸಿಗಳ ವಿರುದ್ಧ ಆಟೋ ಚಾಲಕರು ಸಮರ ಸಾರಿದ್ದು, ತಮ್ಮ ಬೇಡಿಕೆಗಳಿಗೆ ಜಿಲ್ಲಾಡಳಿತ ಯಾವ ರೀತಿ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.
