ಉಡುಪಿ: ಮೆಸ್ಕಾಂ ಇಲಾಖೆಯ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಸಲಾಯಿತು.
ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಮೆಸ್ಕಾಂ ಇಲಾಖೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಮೆಸ್ಕಾಂ ಕಚೇರಿ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.
