– ತಂದೆ ವರ್ಷದ ತಿಥಿ ಕಾರ್ಯಕ್ಕೆ ಪ್ರದೋಷ್ಗೆ ಸಿಗದ ಮಧ್ಯಂತರ ಜಾಮೀನು
ಬೆಂಗಳೂರು: ಕೊಲೆ ಪ್ರಕರಣದ ಆರೋಪದಲ್ಲಿ ಜೈಲಲ್ಲಿರುವ ನಟ ದರ್ಶನ್ (Darshan) ಹಾಗೂ ಅವರ ಕುಟುಂಬದ ವಿರುದ್ಧ ಮಾತನಾಡದಂತೆ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಧನ್ವೀರ್ ಮತ್ತು ವಿಜಯಲಕ್ಷ್ಮಿ ಜಟಾಪಟಿ ಪ್ರಕರಣ ಹಿನ್ನೆಲೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡದಂತೆ ನಿನ್ನೆಯಷ್ಟೇ ಕೋರ್ಟ್ಗೆ ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಇದನ್ನೂ ಓದಿ: ಫಿಸಿಯೋಥೆರಪಿಗೆ ಅವಕಾಶ ಕೋರಿ ನ್ಯಾಯಾಲಯಕ್ಕೆ ದರ್ಶನ್ ಅರ್ಜಿ
ಇನ್ನು, ತಂದೆ ವರ್ಷದ ತಿಥಿ ಕಾರ್ಯಕ್ಕೆ ಪ್ರದೋಷ್ಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಲಾಗಿದೆ. 59ನೇ ಸಿಸಿಹೆಚ್ ಕೋರ್ಟ್ ಪ್ರದೋಷ್ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ.
ತಂದೆ ಪಿತೃಕಾರ್ಯದಲ್ಲಿ ಪಾಲ್ಗೊಳ್ಳಲು 3 ವಾರ ಜಾಮೀನಿಗೆ ಪ್ರದೋಷ್ ಅರ್ಜಿ ಹಾಕಿದ್ದ. ಕನಿಷ್ಠ 3 ವಾರಗಳ ಜಾಮೀನು ನೀಡುವಂತೆ ಪ್ರದೋಷ್ ಪರ ವಕೀಲರು ವಾದ ಮಂಡಿಸಿದ್ದರು. ಪ್ರದೋಷ್ ಜಾಮೀನು ಅರ್ಜಿಗೆ ದರ್ಶನ್ ಪರ ವಕೀಲರ ವಿರೋಧಿಸಿದ್ದರು. ಇದನ್ನೂ ಓದಿ: ಧನ್ವೀರ್ಗೆ ಹೆಚ್ಚಿದ ಸಂಕಷ್ಟ- ಎರಡು ಪ್ರತ್ಯೇಕ ಠಾಣೆಗಳಲ್ಲಿ ಎಫ್ಐಆರ್ ದಾಖಲು
ಮಾಫಿ ಸಾಕ್ಷಿಯಾಗಿರುವ ವ್ಯಕ್ತಿಗೆ ಜಾಮೀನು ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಸಾಕ್ಷ್ಯ ವಿಚಾರಣೆ ಮತ್ತು ಕ್ರಾಸ್ ಎಗ್ಸಾಮಿನೇಷನ್ ಮುಗಿಯುವವರೆಗೂ ಜೈಲಿನಲ್ಲಿಯೇ ಇರಬೇಕು. ಷರತ್ತು ವಿಧಿಸಿಯೇ ಕೋರ್ಟ್ ಆತನನ್ನು ಮಾಫಿ ಸಾಕ್ಷಿಯಾಗಿ ಒಪ್ಪಿಕೊಂಡಿದೆ. ಹೊರಗೆ ಬಿಟ್ಟರೆ ಕೋರ್ಟ್ ವಿಧಿಸಿರುವ ಷರತ್ತು ನಿಷ್ಪಲವಾಗುತ್ತವೆ ಎಂದು ಹಷ್ಮತ್ ಪಾಷ ವಾದಿಸಿದ್ದರು.
