ಬೆಂಗಳೂರು: ಕಬ್ಬಿಗೆ 5,500 ರೂಪಾಯಿ ಬೆಲೆ ನಿಗದಿಪಡಿಸಬೇಕು ಎಂದು ಕಬ್ಬು ಬೆಳೆಯುವ ರೈತರು (Sugarcane Farmers) ಕಳೆದ 15 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ.
ರಾಜ್ಯ ರೈತ ಸಂಘ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡುತ್ತಿದ್ದಂತೆ ಬೆಳಗಾವಿ ಜಿಲ್ಲಾಡಳಿತ ಹೆದ್ದಾರಿ ಬಂದ್ ಮಾಡದಂತೆ ಆದೇಶ ಹೊರಡಿಸಿತು. ಎನ್ಹೆಚ್ 04 ಬಂದ್ ಮಾಡುವುದನ್ನು ಕೈಬಿಟ್ಟ ಪ್ರತಿಭಟನಾಕಾರರು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ 27 ಕಡೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ರೈತ ಮುಖಂಡರು ಬಸ್ ತಡೆದು ಪ್ರತಿಭಟನೆ ಮಾಡುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ಸರ್ಕಲ್ನಲ್ಲಿ ರೈತರ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪಟ್ಟಣ ಗ್ರಾಮೀಣ ಭಾಗದಲ್ಲೂ ಕೂಡ ರೈತರ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ ಬಂದ್ ಮಾಡಿದ್ದಾರೆ. ಗ್ರಾಮೀಣ ಪ್ರದೇಶಕ್ಕೆ ತೆರಳುವ ಬಸ್ಗಳಿಗೆ ರೈತರು ಅಡ್ಡಗಟ್ಟಿದ್ದಾರೆ. ರಸ್ತೆ ಬಂದ್ ಹಿನ್ನೆಲೆ ಬಸ್ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೇಂದ್ರ ರಾಜ್ಯ ಸರ್ಕಾರ ವಿರುದ್ಧ ರೈತರು ಘೋಷಣೆ ಕೂಗುತ್ತಿದ್ದಾರೆ. ಇದನ್ನೂ ಓದಿ: ಕಬ್ಬು ಬೆಳೆಗಾರರ ಹೋರಾಟಕ್ಕೆ ಜಿಲ್ಲಾಡಳಿತ ಬ್ರೇಕ್ – ರಾಷ್ಟ್ರೀಯ ಹೆದ್ದಾರಿ, ಟೋಲ್ ಪ್ಲಾಜಾಗಳ ಬಂದ್ಗೆ ನಿಷೇಧಾಜ್ಞೆ ಜಾರಿ
ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ನಲ್ಲಿ ಹೆದ್ದಾರಿಗೆ ಅಡ್ಡಲಾಗಿ ಕಲ್ಲು-ಮುಳ್ಳು ಹಾಕಿ, ಟ್ರ್ಯಾಕ್ಟರ್ ನಿಲ್ಲಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರ ಜೊತೆ ರೈತರು ವಾಗ್ವಾದ ನಡೆಸಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ ಗೋಯಲ್ ಭೇಟಿ ನೀಡಿ ರೈತರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.
ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ತಾಲೂಕಿನ ಕಂಚಾರಗಟ್ಟಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಹೆದ್ದಾರಿ ಮೊಳಕಾಲ್ಮೂರ-ಶಿರಸಿ ರಸ್ತೆ ಬಂದ್ ಮಾಡಿ ಹೋರಾಟ ಮಾಡಿದ್ದಾರೆ. ಕಬ್ಬಿಗೆ ದರ ನಿಗದಿ ಮಾಡುವಂತೆ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರು ಒತ್ತಾಯಿಸಿದ್ದಾರೆ.
ಕೆಲ ರೈತರಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಮತ್ತು ರಾಜ್ಯದ ಸರ್ಕಾರದ ವಿರುದ್ಧ ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ. ಹಾವೇರಿಯಲ್ಲಿ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ರೈತ ಮುಖಂಡರು, ಕಬ್ಬು ಬೆಳೆಗಾರರು ಬಂದ್ ಮಾಡಿಸಿದ್ದಾರೆ. ರೈತ ಮುಖಂಡರಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ರಸ್ತೆ ತಡೆದು ರೈತರು ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ ಬಂದ್ಗೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ರಾಜ್ಯ ಹೆದ್ದಾರಿಗಳನ್ನ ತಡೆದು ರೈತರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಚಾರ ಬಂದ್ ಹಿನ್ನೆಲೆ ವಾಹನ ಸವಾರರು ಪರದಾಡುವಂತಾಗಿದೆ. ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದೆ. ಬಸ್ ಸಂಚಾರ ಬಂದ್ ಹಿನ್ನೆಲೆ ಪ್ರಯಾಣಿಕರು ಪರದಾಡಿದ್ದಾರೆ. ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಘೋಷಣೆ ಮಾಡಲಾಗಿದೆ.
ಅಂಗಡಿ ಮುಗಟ್ಟುಗಳನ್ನ ರೈತರು ಬಂದ ಮಾಡಿಸಿದ್ದಾರೆ. ವ್ಯಾಪಾರ ವಹಿವಾಟು ಬಹುತೇಕ ಕಡೆ ಸಂಪೂರ್ಷ ಬಂದ್ ಆಗಿದೆ. ಗ್ರಾಮೀಣ ಭಾಗದಲ್ಲೂ ರೈತರು ಪ್ರತಿಭಟನೆ ನಡೆಸಿದ್ದಾರೆ.
