ಶಿವಮೊಗ್ಗ: ಆಗುಂಬೆ (Agumbe) ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ (Accident) MBBS ವಿದ್ಯಾರ್ಥಿಯೊಬ್ಬರು (Student) ಸಾವನ್ನಪ್ಪಿದ್ದಾರೆ.
ರಾಯಚೂರು ಮೂಲದ ಡಾ.ಚೇತನ್ (28) ಮೃತ ದುರ್ದೈವಿ. ಅವರು ಐವರು ಸ್ನೇಹಿತರೊಂದಿಗೆ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದಾಗ, ಆಗುಂಬೆ ಸಮೀಪದ ಕವರಿಹಕ್ಲು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮಣ್ಣಿನ ದಿಬ್ಬಕ್ಕೆ ಗುದ್ದಿದೆ. ಅಪಘಾತದ ತೀವ್ರತೆಗೆ ಚೇತನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಎಂಡಿ ವ್ಯಾಸಾಂಗ ಮಾಡುತ್ತಿದ್ದರು. ಇದನ್ನೂ ಓದಿ: ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ ಆರೋಪ – ವಿಷ ಕುಡಿದು ಯುವತಿ ಆತ್ಮಹತ್ಯೆ
ಉಳಿದ ನಾಲ್ವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗುಂಬೆ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಯೂಟ್ಯೂಬರ್ ಮಧು ಗೌಡ ಪತಿ ವಿರುದ್ಧ ಹಿಟ್ & ರನ್ ಆರೋಪ – FIR ದಾಖಲು, ಕಾರು ಸೀಜ್
