ಬೆಂಗಳೂರು: ಆಂಧ್ರಪ್ರದೇಶದ ಶಾಲೆಯೊಳಗೆ ಪ್ರೀತಿ ನಿರಾಕರಸಿದ್ದಕ್ಕೆ ನಡೆಸಿದ ಭೀಕರ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿಗೆ ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital) ಚಿಕಿತ್ಸೆ ಮುಂದುವರಿದಿದೆ.
ಬಾಲಕಿಯ ಸ್ಥಿತಿ ಇನ್ನೂ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ದಾಳಿಯಲ್ಲಿ ಬಾಲಕಿಯ ಮುಖ ಹಾಗೂ ದೇಹದ ಮೇಲೆ ಗಂಭೀರ ಗಾಯಗಳಾಗಿದ್ದವು. ದೇಹದ ಮೇಲೆ ಹಲವು ಆಳವಾದ ಗಾಯಗಳಾಗಿದ್ದು, ಒಂದು ಗಾಯ ಸುಮಾರು 7 ಮಿಲಿ ಮೀಟರ್ ಉದ್ದವಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಶಾಲೆಗೆ ನುಗ್ಗಿ ಮರ ಕಡಿಯುವ ಯಂತ್ರದಿಂದ ದಾಳಿ – 10ನೇ ತರಗತಿ ವಿದ್ಯಾರ್ಥಿನಿ ಸಾವು
ಬೆಂಗಳೂರ ವೈದ್ಯರು ಸುಮಾರು 20 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದು, ಗಾಯಗಳಿಗೆ ಹೊಲಿಗೆ ಹಾಕಲು ಬರೋಬ್ಬರಿ 114 ಬಾಕ್ಸ್ ಶಸ್ತ್ರಚಿಕಿತ್ಸೆಯ ದಾರ ಬಳಸಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಬಾಲಕಿಯ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಆಕೆಗೆ ಹಲವು ಬಾರಿ ರಕ್ತ ವರ್ಗಾವಣೆ ಮಾಡಲಾಗಿದ್ದು, ಸದ್ಯ ಪೀಡಿಯಾಟ್ರಿಕ್ ಐಸಿಯುನಲ್ಲಿ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮುಂದಿನ 48 ಗಂಟೆಗಳ ಕಾಲ ನಿಗಾವಹಿಸಲು ವೈದ್ಯರು ಮುಂದಾಗಿದ್ದಾರೆ.
ಅ.31ರಂದು ಆಂಧ್ರಪ್ರದೇಶದ ರಾಪ್ತಾಡು ಗ್ರಾಮದ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ಬಾಲಕಿ ಮೇಲೆ ಆಕೆಯ ಸಂಬಂಧಿಯೇ ಮರ ಕಡಿಯುವ ಮಷಿನ್ನಿಂದ ಹಲ್ಲೆ ನಡೆಸಿದ್ದ. ಈ ವೇಳೆ ಯುವಕ ಪ್ರೀತಿಸುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಡೆಯಲು ಬಂದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಗೋಕರ್ಣ | ದುಬ್ಬನಶಶಿ ಬೀಚ್ನಲ್ಲಿ ನಾಪತ್ತೆಯಾಗಿದ್ದ ಬೆಂಗಳೂರು ಯುವಕನ ಮೃತದೇಹ ಪತ್ತೆ
