ಚಿತ್ರದುರ್ಗ: ಸಿಎಂ ಡಿಕೆ ಶಿವಕುಮಾರ್ (DK Shivakumar) ಮಂಗಳವಾರ ಚಿತ್ರದುರ್ಗಕ್ಕೆ (Chitradurga) ಭೇಟಿ ನೀಡಲಿದ್ದು, ಹಿರಿಯೂರು (Hiriyur) ತಾಲೂಕು ವ್ಯಾಪ್ತಿಯ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಹಿರಿಯೂರು ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆ ಸಿಎಂ ಡಿಕೆಶಿ ಈ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ಹಿರಿಯೂರು ತಾಲೂಕು ಕ್ರೀಡಾಂಗಣಕ್ಕೆ ಸಿಎಂ ಆಗಮಿಸಲಿದ್ದಾರೆ. ಬೆಂಗಳೂರಿಂದ ಹೆಲಿಕಾಪ್ಟರ್ ಮೂಲಕ ಡಿಕೆಶಿ ಆಗಮಿಸಲಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಸಿದ್ದಕ್ಕೆ ಭೀಕರ ದಾಳಿ – ಆರೋಪಿ ಕಾಲಿಗೆ ಗುಂಡೇಟು, ಬೆಂಗಳೂರು ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ
ಬೆಳಗ್ಗೆ 11 ಗಂಟೆಗೆ ಧರ್ಮಪುರದಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿದಂತೆ ಇತರೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12:30ಕ್ಕೆ ದಿಂಡಾವರದಲ್ಲಿ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹಿರಿಯೂರು ಪಟ್ಟಣ ಯುಜಿಡಿ ಕಾಮಗಾರಿಗೆ ಚಾಲನೆ ಒಕ್ಕಲಿಗರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ 3 ಗಂಟೆಗೆ ಐಮಂಗಲದಲ್ಲಿ ಕೆರೆಗೆ ಗಂಗಾಪೂಜೆ, 53 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಸಿಎಂ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ. ಇದನ್ನೂ ಓದಿ: ಅಧಿಕೃತವಾಗಿ ಛಿದ್ರವಾಗುವ ಹಂತಕ್ಕೆ ಬಂತು ಸಿದ್ದರಾಮಯ್ಯ ಕೋರ್ ಟೀಂ!
