– ಭಾನುವಾರ ದೆಹಲಿಯಲ್ಲಿ ನಡೆದ ಸಭೆ ಇತಿಹಾಸ ಸೃಷ್ಟಿ
– ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಕೆಳಹಂತದ ನಾಯಕರನ್ನು ದೆಹಲಿಗೆ ಕರೆತಂದಿದ್ದೆವು
ನವದೆಹಲಿ: ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದೆಹಲಿಯಲ್ಲಿ ಭಾನುವಾರ ನಡೆದ ಇಂಡಿಯಾ ಕೂಟದ ಬೃಹತ್ ಸಭೆಯ ಬೆನ್ನಲ್ಲೇ, ಚುನಾವಣಾ ಆಯೋಗದ (ECI) ವಿರುದ್ಧ ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ (Freedom Park) ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಪ್ರತಿಭಟನೆಯಲ್ಲಿ ಇಂಡಿಯಾ ಕೂಟದ ವಿವಿಧ ಪಕ್ಷಗಳು ಭಾಗಿಯಾಗಲಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ (BK Hariprasad) ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಭಾನುವಾರ ನಡೆದ ಸಭೆ ಐತಿಹಾಸಿಕವಾಗಿದ್ದು, ಸ್ವಾತಂತ್ರ್ಯಾನಂತರ ನಡೆದ ದೊಡ್ಡ ಸಭೆಗಳಲ್ಲಿ ಇದೂ ಒಂದಾಗಿದೆ ಎಂದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗಿರುವ ಆತಂಕದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಕರ್ನಾಟಕದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿಲ್ಲಿಯಲ್ಲಿ 2 ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅಸ್ತು – ನ.9 ರಿಂದ ಮತ್ತೆ ಸಂಪೂರ್ಣ ನಿಷೇಧ
ಪ್ರಜಾಪ್ರಭುತ್ವಕ್ಕೆ ಎದುರಾಗಿರುವ ಆತಂಕದ ಬಗ್ಗೆ ತಳಮಟ್ಟದ ನಾಯಕರಿಗೂ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಕೆಳಹಂತದ ನಾಯಕರನ್ನು ದೆಹಲಿಗೆ ಕರೆತಂದಿದ್ದೆವು. ಪಕ್ಷದ ನಾಯಕರು ನೀಡಿದ ಕರೆಯ ಮೇರೆಗೆ ಕರ್ನಾಟಕದ ವಿವಿಧ ಭಾಗಗಳಿಂದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರಾಖಂಡ ಹೆಲಿಕಾಪ್ಟರ್ ದುರಂತ – ಸರ್ಕಾರಿ ಗೌರವದೊಂದಿಗೆ ನೆರವೇರಿದ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ಅಂತ್ಯಕ್ರಿಯೆ
ವ್ಯಾಪಾರಿಗಳ ನಷ್ಟದ ಆರೋಪಕ್ಕೆ ತಿರುಗೇಟು:
ಇಂಡಿಯಾ ಕೂಟದ ದೆಹಲಿ ಸಭೆಯಿಂದಾಗಿ ವ್ಯಾಪಾರಿಗಳಿಗೆ 12 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂಬ ವ್ಯಾಪಾರಿಗಳ ಆರೋಪವನ್ನು ಕಾಂಗ್ರೆಸ್ ನಾಯಕ ತಳ್ಳಿಹಾಕಿದ್ದಾರೆ. 12 ಲಕ್ಷ ಕೋಟಿ ರೂಪಾಯಿ ಎನ್ಪಿಎ ವಿಚಾರವನ್ನು ಹೇಳಲು ಹೋಗಿ 12 ಸಾವಿರ ಕೋಟಿ ರೂಪಾಯಿ ನಷ್ಟ ಎಂದು ಹೇಳಿರಬಹುದು ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಹಾಲಿನ ದರ ಏರಿಕೆ ಸಂಭ್ರಮ – ಸಿಎಂ, ಡಿಸಿಎಂ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
ಪಹರ್ಗAಜ್ ಸೇರಿದಂತೆ ದೆಹಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಾರಿಗಳು ಇಂತಹ ಆರೋಪ ಮಾಡಿರುವುದು ತಮ್ಮ ಗಮನಕ್ಕೆ ಬಂದಿಲ್ಲ. ಸಣ್ಣಪುಟ್ಟ ವ್ಯಾಪಾರಿಗಳು ಸಭೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಆರ್ಎಸ್ಎಸ್ ಸಂಘಟನೆಗಳೂ ಈ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವಾಟರ್ ಹೀಟರ್ ಹಾಕಿದ್ದ ಬಕೆಟ್ ಮುಟ್ಟಿ ಬಾಲಕ ದುರ್ಮರಣ
ಸ್ಟಿಂಗ್ ಪ್ರಕರಣದ ಸೂತ್ರಧಾರರ ವಿರುದ್ಧ ಕ್ರಮಕ್ಕೆ ಒತ್ತಾಯ:
ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸಂಬಂಧಪಟ್ಟವರ ನಡುವೆ ಲಿಂಕ್ ಇದೆಯೋ ಇಲ್ಲವೋ ಎಂಬುದು ತಮ್ಮ ಪ್ರಶ್ನೆಯಲ್ಲ. ಇಂತಹ ಅಸಹ್ಯಕರ ಕೆಲಸದ ಹಿಂದೆ ಯಾರಿದ್ದಾರೆ ಎಂಬುದೇ ಮುಖ್ಯ ಪ್ರಶ್ನೆ ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ಪಾತ್ರಧಾರಿಗಳು ಹಲವರಿರಬಹುದು. ಆದರೆ, ಇದರ ಹಿಂದಿರುವ ಸೂತ್ರಧಾರರು ಯಾರು ಎಂಬುದನ್ನು ಪತ್ತೆಹಚ್ಚಬೇಕು. ಸೂತ್ರಧಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ತಮ್ಮ ಒತ್ತಾಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಟ ಧನ್ವೀರ್ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಿದ ವಿಜಯಲಕ್ಷ್ಮಿ
ನಿಗಮ ಮಂಡಳಿ ನೇಮಕಾತಿ ಶೀಘ್ರ ಘೋಷಣೆ:
ನಿಗಮ ಮಂಡಳಿಗಳ ನೇಮಕಾತಿ ಕುರಿತು ಮಾತನಾಡಿದ ಅವರು, ಮೊದಲ ಹಂತದಲ್ಲಿ ಶಾಸಕರು ಹಾಗೂ ಮಾಜಿ ಶಾಸಕರ ಹೆಸರುಗಳನ್ನು ಮುಖ್ಯಮಂತ್ರಿ ಮತ್ತು ಮಾಜಿ ಮುಖ್ಯಮಂತ್ರಿ ಶಿಫಾರಸು ಮಾಡಿದ್ದರು. ಆ ಹೆಸರುಗಳಿಗೆ ಸಂಪೂರ್ಣ ಅನುಮೋದನೆ ದೊರೆತಿದ್ದು, ಯಾವುದೇ ಸಂದರ್ಭದಲ್ಲಿ ನೇಮಕಾತಿ ಪಟ್ಟಿ ಘೋಷಣೆಯಾಗಬಹುದು ಎಂದರು. ಇದನ್ನೂ ಓದಿ: ಪ್ರಜ್ವಲ್ ಕೇಸಲ್ಲಿ ಅಮಿತ್ ಶಾ ಅವ್ರೇ ಅವಾರ್ಡ್ ಕೊಟ್ಟಿದ್ರು, ಸ್ಟಿಂಗ್ ಕೇಸಲ್ಲೂ ಅವಾರ್ಡ್ ಸಿಗುತ್ತೆ: ಪ್ರಿಯಾಂಕ್ ಖರ್ಗೆ
ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ಪರಮಾಧಿಕಾರಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಆದರೆ, ಖಾಲಿ ಇರುವ ಸ್ಥಾನವನ್ನು ಭರ್ತಿ ಮಾಡಬೇಕು ಹಾಗೂ ಆದಷ್ಟು ಬೇಗ ಒಬ್ಬ ಮಹಿಳೆಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬುದು ಪಕ್ಷದ ನಿಲುವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮ ದರ್ಶನ ಸಾಲಲ್ಲಿ ಪ್ರತಿ ನಿಮಿಷಕ್ಕೆ 267 ಜನ ಪ್ರವೇಶ – ಸುಮಾರು 2.5 ಲಕ್ಷ ಭಕ್ತರಿಂದ ಹಾಸನಾಂಬೆ ದರ್ಶನ: ಡಿಸಿ ಲತಾಕುಮಾರಿ
ಜನವರಿಯೊಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ:
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಜನವರಿಯೊಳಗೆ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಮತದಾರರ ಪಟ್ಟಿ ಬಂದಿದ್ದು, ಅದನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಚುನಾವಣೆ ನಡೆಸಲು ಡಿಸೆಂಬರ್ ಗಡುವು ಇರುವುದರಿಂದ, ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಲು ಯಾವುದೇ ತೊಂದರೆಯಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನ.13 ರಂದೇ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ – ತೇಜಸ್ವಿ ಸೂರ್ಯ

