ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ನವೆಂಬರ್ 3ರಂದು ಮಧ್ಯಾಹ್ನ 12ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ವೈದ್ಯಕೀಯ ಕಾಲೇಜುಗಳ (Medical Colleges) ಶುಲ್ಕ ವಿವರಗಳು ಪರಿಷ್ಕರಣೆ ಆಗಿದ್ದು, ಅದನ್ನು ಗಮನಿಸಿಯೇ ಆಪ್ಷನ್ಸ್ ದಾಖಲಿಸಿ ಎಂದು ಅವರು ಸಲಹೆ ನೀಡಿದ್ದಾರೆ.
