ಬೆಂಗಳೂರು: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ನಲ್ಲಿ, (ಜ್ಞಾನ ಸೇತು) ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯೊಂದಿಗೆ ಉನ್ನತ ಶಿಕ್ಷಣ ಇಲಾಖೆ (MoU) ಒಡಂಬಡಿಕೆ ವಿನಿಮಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಖಾಸಗಿ ಸಂಸ್ಥೆಗಳು ಸಮಾಜಸೇವೆಯ ಭಾಗವಾಗಿ ವಿದ್ಯಾರ್ಥಿಗಳ ಕಲಿಕೆಗೆ ಸಹಾಯ ನೀಡುತ್ತಿರುವುದು ಅತ್ಯಂತ ಸಂತಸದ ವಿಷಯ. ರಾಜ್ಯದಲ್ಲಿ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿಯಲ್ಲಿರುವ 550ಕ್ಕೂ ಹೆಚ್ಚು ಕಾಲೇಜುಗಳಲ್ಲಿ, ಸುಮಾರು 5 ಲಕ್ಷ ವಿದ್ಯಾರ್ಥಿಗಳಿದ್ದು, ಈ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಗ್ರಾಮೀಣ ಹಿನ್ನೆಲೆಗೆ ಸೇರಿದವರಾಗಿದ್ದಾರೆ. ಇವರಿಗೆ ಗುಣಮಟ್ಟದ ಶಿಕ್ಷಣ ನೀಡಲು ಈ ಜ್ಞಾನಸೇತು ಯೋಜನೆ ಸಹಕಾರಿಯಾಗಲಿದೆ ಎಂದರು.
ಇದರೊಂದಿಗೆ, ರೋಟರಿ ಸಂಸ್ಥೆ ಉನ್ನತ ಶಿಕ್ಷಣ ಇಲಾಖಾ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ, ಆಧುನಿಕ ಕಲಿಕಾ ಸಹಾಯಕ ಚಟುವಟಿಕೆಗಳನ್ನ ರೂಪಿಸಲು 3 ವರ್ಷಗಳ ಅವಧಿಗೆ MoU ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿ ಈ ವರ್ಷ 250 ಲ್ಯಾಪ್ ಟಾಪ್ ಗಳಲ್ಲಿ ಲೈಸನ್ಸ್ಡ್ ಸಾಫ್ಟ್ವೇರ್ ಅಳವಡಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಸಿದ್ಧತೆ ನಡೆಸಿದೆ. ಸರ್ಕಾರಿ ಕಾಲೇಜುಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯ/ ಡಿಜಿಟಲ್ ಲರ್ನಿಂಗ್ ಸೆಂಟರ್ ರೂಪಿಸಲು ಯೋಜನೆ ಸಿದ್ಧಪಡಿಸಿದೆ ಎಂದರು.
ಮೈಕ್ರೋ ಸಾಫ್ಟ್ ಕಂಪನಿಯಿಂದ 500, ಕಾಗ್ನಿಸೆಂಟ್ ಕಂಪನಿಯಿಂದ 1000 ಕಂಪ್ಯೂಟರ್ ಗಳನ್ನ (Desktop) ಶೀಘ್ರದಲ್ಲಿಯೇ ಸರ್ಕಾರಿ ಕಾಲೇಜುಗಳಿಗೆ ವಿತರಿಸಲಿದೆ. ಇವುಗಳ ಸಾಗಣೆ, ಸಾಪ್ಟವೇರ್ ಅಳವಡಿಕೆ, ಪರೀಕ್ಷೆ (Testing), ವಿತರಣೆಗಳಿಗೆ ತಗಲುವ ವೆಚ್ಚವನ್ನ ರೋಟರಿ ಸಂಸ್ಥೆಯೇ ಭರಿಸಲಿದೆ. ಇದಲ್ಲದೇ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿಗೂ ಸಹಕಾರ ನೀಡಲಿದೆ. ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ದಿ, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ, ಇ-ತ್ಯಾಜ್ಯ ನಿರ್ವಹಣೆ, ತ್ಯಾಜ್ಯ ನೀರಿನ ಸಂಸ್ಕರಣೆ ಸೇರಿದಂತೆ ಹಲವಾರು ರೀತಿಯಲ್ಲಿ ಇಲಾಖೆಯೊಂದಿಗೆ ಕೈ ಜೋಡಿಸಲಿದೆ.
ಇಂದು ತುಮಕೂರಿನ ಪ್ರಥಮದರ್ಜೆ ಕಾಲೇಜು, ಕೆ.ಆರ್ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸಚಿವರು ಸಾಂಕೇತಿಕವಾಗಿ ಲ್ಯಾಪ್ ಟಾಪ್ ವಿತರಿಸಿದರು.
ನಮ್ಮ ಸರ್ಕಾರ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಆಧುನಿಕ ಶಿಕ್ಷಣ ನೀಡಲು ಹಲವಾರು ಯೋಜನೆ ರೂಪಿಸಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೂ ಎಲ್ಲ ರೀತಿಯ ಸೌಲಭ್ಯ ನೀಡುವುದು ನಮ್ಮ ಗುರಿಯಾಗಿದೆ ಎಂದು ಸಚಿವ ರಾಯರಡ್ಡಿ ಹೇಳಿದರು.

