-ನಿನ್ನೆ ಮಧ್ಯಾಹ್ನದಿಂದ ಇಂದು ಮಧ್ಯಾಹ್ನ 2 ಗಂಟೆಯವರೆಗೆ ನಿರಂತರ ದರ್ಶನಕ್ಕೆ ಅವಕಾಶ
ಹಾಸನ: ಹಾಸನಾಂಬ ದೇವಿ ಸಾರ್ವಜನಿಕ ದರ್ಶನದ ಇವತ್ತು (ನ.3) ಐದನೇ ದಿನ. ಇಂದೂ ಕೂಡ ಸಾವಿರಾರು ಸಂಖ್ಯೆಯಲ್ಲಿ ಭಕ್ತಗಣವು ದೇವಿ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ.
ನಿರೀಕ್ಷೆಗೂ ಮೀರಿ ಸಾರ್ವಜನಿಕರು ದೇವಿ ದರ್ಶನಕ್ಕೆ ಬರುತ್ತಿದ್ದು, ಇದರಿಂದ ಭಕ್ತರಿಗೆ ದೇವಿ ದರ್ಶನ ಪಡೆಯಲು ವಿಳಂಬವಾಗುತ್ತಿದೆ. ಧರ್ಮ ದರ್ಶನದ ಸಾಲಿನಲ್ಲಿ ಬರುವ ಭಕ್ತರಿಗೆ ಏಳರಿಂದ ಎಂಟು ಗಂಟೆಯಲ್ಲಿ ದೇವಿ ದರ್ಶನ ಸಿಗುತ್ತಿದೆ. 1000 ರೂ. ವಿಶೇಷ ದರ್ಶನದ ಸಾಲಿನಲ್ಲಿ ಭಕ್ತರು ಕೊಂಚ ಕಡಿಮೆಯಿದ್ದರೆ, 300 ರೂ. ವಿಶೇಷ ದರ್ಶನದ ಸಾಲಿನಲ್ಲಿ ಭಕ್ತರು ಎರಡು ಕಿಲೋಮೀಟರ್ವರೆಗೂ ನಿಂತಿದ್ದಾರೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ದೇವಾಲಯದ ಸುತ್ತಲೂ ಜನಸ್ತೋಮ ನೆರೆದಿದೆ. ಇದನ್ನೂ ಓದಿ: ಕಾಂಗ್ರೆಸ್ ಆಕ್ರೋಶ ಬೆನ್ನಲ್ಲೇ ಕ್ಷಮೆಯಾಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆ, ಮುಂಜಾನೆ 3 ಗಂಟೆಯಿಂದ 6 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತಿತ್ತು. ಆದರೆ ಭಕ್ತರ ಹಿತದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಪ್ರಧಾನ ಅರ್ಚಕ ನಾಗರಾಜ್ ಅವರಿಗೆ ಮನವಿ ಮಾಡಿದ್ದರು.
ಸಚಿವರ ಮನವಿಗೆ ಸ್ಪಂದಿಸಿ, ಭಕ್ತರು ಹೆಚ್ಚಾದ ಕಾರಣ ನೈವೇದ್ಯಕ್ಕಾಗಿ ಮುಂಜಾನೆ 3 ಗಂಟೆಯಿಂದ 6 ಗಂಟೆಯವರೆಗೆ ಗರ್ಭಗುಡಿ ಬಾಗಿಲನ್ನು ಮುಚ್ಚಲಿಲ್ಲ. ಹೀಗಾಗಿ, ನಿನ್ನೆ ಮಧ್ಯಾಹ್ನ 3:30 ರಿಂದ ಇಂದು ಮಧ್ಯಾಹ್ನ 2 ಗಂಟೆಯವರೆಗೆ ನಿರಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಪೋಸ್ಟರ್ ವಾರ್; ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
