ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಅವರು ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಪೋಸ್ಟರ್ಗಳನ್ನು ಅಂಟಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ಹಾಗೂ ಬಿ.ವೈ. ವಿಜಯೇಂದ್ರ ಅವರ ಮನೆ ಬಳಿ ಭಿತ್ತಿಪತ್ರಗಳನ್ನು ಅಂಟಿಸಿರುವ ಕಾರ್ಯಕರ್ತರು, ಹೇಳಿಕೆಗಳಿಗೆ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.
ರಾಜಾಜಿನಗರ, ಮಂಜುನಾಥನಗರ ಸೇರಿದಂತೆ ನಗರದ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಈ ಪೋಸ್ಟರ್ಗಳಲ್ಲಿ ವಿಜಯೇಂದ್ರ ಅವರನ್ನು ಅವಮಾನಿಸುವ ರೀತಿಯ ಬರಹಗಳಿವೆ. ಇದರಿಂದಾಗಿ ಬೆಂಗಳೂರಿನಲ್ಲಿ ಮತ್ತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಪೋಸ್ಟರ್ ವಾರ್ ಮುನ್ನೆಲೆಗೆ ಬಂದಿದೆ.ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ವಿದಾಯ
