ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಮುರಸು ಚಂಡಮಾರುತ (Murasu Cyclone) ಎಫೆಕ್ಟ್ನಿಂದಾಗಿ ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಆಂಧ್ರಕ್ಕೆ ಅಪ್ಪಳಿಸಿದ `ಮುರಸು’ – 120 ಕಿ.ಮೀ ವೇಗದಲ್ಲಿ ಗಾಳಿ, ಭಾರೀ ಮಳೆ ಸಾಧ್ಯತೆ
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಬೀಳಲಿದೆ.
ಮುರಸು ಎಫೆಕ್ಟ್ನಿಂದಾಗಿ ಆಂಧ್ರ, ತಮಿಳುನಾಡು, ಒಡಿಸ್ಸಾ ಹಾಗೂ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ವಿಶಾಖಪಟ್ಟಣಂ ತೈಲ ಸಂಸ್ಕರಣಾಗಾರದಲ್ಲಿ ಭಾರೀ ಸ್ಫೋಟ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ
