ತುಮಕೂರು: ನಟ ದರ್ಶನ್ ಅವರಿಗೆ ಜಾಮೀನು ದೊರೆತು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿ ಎಂದು ಪ್ರಾರ್ಥಿಸಿ, ಪತ್ನಿ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಚೌಲಿಹಳ್ಳಿ ಗ್ರಾಮದೇವತೆ ಶ್ರೀ ಕರಿಕಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಚೌಲಿಹಳ್ಳಿ ಗ್ರಾಮದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮಿ, ಪತಿಗೆ ಜಾಮೀನು ಸಿಗಲಿ ಎಂದು ದೇವಿಯ ಬಳಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ದೇವರ ಅಪ್ಪಣೆ ಕೇಳಿದಾಗ, ದರ್ಶನ್ ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗುವ ಸೂಚನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.
ದರ್ಶನ್ ಬಿಡುಗಡೆಯಾದರೆ ಕುಟುಂಬ ಸಮೇತ ಭೇಟಿ
ದರ್ಶನ್ ಜೈಲಿನಿಂದ ಬಿಡುಗಡೆಯಾದ ಬಳಿಕ ಪತಿಯೊಂದಿಗೆ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಬಂದು ಹರಕೆ ತೀರಿಸುವುದಾಗಿ ವಿಜಯಲಕ್ಷ್ಮಿ ಹರಕೆ ಹೊತ್ತಿದ್ದಾರೆ ಎನ್ನಲಾಗಿದೆ.
ನಂತರ ದೇವಾಲಯದ ಧೂತಯ್ಯ ಸ್ವಾಮಿಯ ದರ್ಶನ ಪಡೆದ ವಿಜಯಲಕ್ಷ್ಮಿ, ಪ್ರದಕ್ಷಿಣೆ ಹಾಕಿದರು. ಈ ವೇಳೆ ಧೂತಯ್ಯ ಸ್ವಾಮಿ ಕುಟುಂಬಕ್ಕೆ ಅಭಯ ನೀಡಿದ್ದು, ದರ್ಶನ್ ಅವರಿಗೆ ಜಾಮೀನು ಸಿಗುವ ಬಗ್ಗೆ ಅಪ್ಪಣೆ ನೀಡಿದ್ದಾರೆ ಎಂದು ಭಕ್ತರು ತಿಳಿಸಿದ್ದಾರೆ.ಇದ್ನನೂ ಓದಿ: ಖಾಲಿ ಮಾತನಾಡುವ ಗಿರಾಕಿ ಅಲ್ಲ, ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ: ಡಿಕೆಶಿ
ವಿಜಯಲಕ್ಷ್ಮಿ ದರ್ಶನ್ ದೇವಾಲಯಕ್ಕೆ ಭೇಟಿ ನೀಡಿದ ಸುದ್ದಿ ತಿಳಿದು ನೂರಾರು ದರ್ಶನ್ ಅಭಿಮಾನಿಗಳು ಚೌಲಿಹಳ್ಳಿಯ ಶ್ರೀ ಕರಿಕಲ್ಲಮ್ಮ ದೇವಾಲಯದ ಬಳಿ ಜಮಾಯಿಸಿದ್ದರು. ದೇವಾಲಯದ ಅರ್ಚಕರು ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದು, ಪೂಜಾ ಕಾರ್ಯಗಳಿಗೆ ಸಹಕರಿಸಿದರು.ಇದ್ನನೂ ಓದಿ: ದಾವಣಗೆರೆಯಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟ – ಎರಡು ವಾಹನ, ಅಂಗಡಿ ಭಸ್ಮ, ಅಕ್ಕಪಕ್ಕದ ಮನೆಗಳಿಗೂ ಹಾನಿ
