-2 ಹಂತಗಳಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನ
ವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ (Vijayapura) ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣವು 2024ರ ಅಂತ್ಯಕ್ಕೆ ಭೌತಿಕವಾಗಿ ಪೂರ್ಣಗೊಂಡಿದ್ದು, ಸರ್ವೋಚ್ಚ ನ್ಯಾಯಾಲಯದ ತಡೆಯಾಜ್ಞೆಯೂ ತೆರವಾಗಿದೆ. 2026ರ ಅ.7ರಂದು ಪರಿಸರ ಇಲಾಖೆಗೆ ಎನ್ಒಸಿ ಹಾಗೂ ಡಿಜಿಸಿಎ ವತಿಯಿಂದ ಲೈಸೆನ್ಸ್ ಪಡೆದುಕೊಳ್ಳಲು ಪ್ರಗತಿ ಪೋರ್ಟಲ್ನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು, ಡಿಸೆಂಬರ್ ಅಂತ್ಯದೊಳಗೆ ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಪ್ರಯಾಣ ಆರಂಭಿಸಲು ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಬಂಡೀಪುರದ ಗೋಪಾಲಸ್ವಾಮಿ ಬೆಟ್ಟದಲ್ಲಿ ಗರ್ಭಿಣಿ ಆನೆ ಸಾವು – ಕಾರಣ ನಿಗೂಢ
2 ಹಂತಗಳಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನ:
ಜಿಲ್ಲೆಯಲ್ಲಿ ಶಾಶ್ವತ ಕುಡಿಯುವ ನೀರಿನ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯ 13 ತಾಲೂಕುಗಳ 211 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ 11 ನಗರ ಪ್ರದೇಶಗಳಲ್ಲಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಆಲಮಟ್ಟಿ ಮತ್ತು ನಾರಾಯಣಪೂರ ಜಲಾಶಯದ ಹಿನ್ನೀರನ್ನು ಶುದ್ಧೀಕರಿಸಿ ಪೂರೈಸಲು ಒಟ್ಟು 3059 ಕೋಟಿ ರೂ. ನಿಗದಿಪಡಿಸಿದ್ದು, ಇದುವರೆಗೆ 2095 ಕೋಟಿ ರೂ. ವೆಚ್ಛ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಆರ್ಥಿಕ ಅಭಿವೃದ್ಧಿ, ಉದ್ಯಮ ಸ್ಥಾಪನೆ ಮತ್ತು ಉದ್ಯೋಗ ಸೃಷ್ಠಿಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಡಿ 2025ರ ನವೆಂಬರ್ನಿಂದ ಇಲ್ಲಿಯವರೆಗೆ ಒಟ್ಟು 6713 ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಆನ್ಲೈನ್ ಮೂಲಕ ಉದ್ಯಮ ನೋಂದಣಿ ಪ್ರಮಾಣ ಪತ್ರ ಪಡೆದಿರುತ್ತವೆ. ಇದರಲ್ಲಿ 32.43 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದ್ದು, 81 ಸಾವಿರ ಉದ್ಯೋಗಾವಕಾಶಗಳು ಸೃಷ್ಠಿಯಾಗಿವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಹಾಸನಾಂಬಾ ಜಾತ್ರೆ | ಪಕ್ಷದ ಪದಾಧಿಕಾರಿಗಳಿಗಾಗಿ 5 ಲಕ್ಷ ರೂ. ಕೊಟ್ಟು 500 ಟಿಕೆಟ್ ಖರೀದಿಸಿದ ಶಿವಲಿಂಗೇಗೌಡ
ಕೆಐಎಡಿಬಿ ಕೈಗಾರಿಕಾ ಪ್ರದೇಶ ಮುಳವಾಡ ಹಂತ-2ರಲ್ಲಿ ರಿಲಾಯನ್ಸ್ ಕಂಜ್ಯೂಮರ್ ಪ್ರೋಡಕ್ಟ್ ಲಿಮಿಟೆಡ್ ಬೆಂಗಳೂರು ಇವರಿಂದ 1,622 ಕೋಟಿ ರೂ. ಯೋಜನಾ ವೆಚ್ಚದಲ್ಲಿ ಪ್ಯಾಕೇಜ್ಡ್ ಕಾರ್ಬೋನೇಟೆಡ್ ಸಾಫ್ಟ್ ಡ್ರಿಂಕ್ಸ್ ಮತ್ತು ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಘಟಕ ಸ್ಥಾಪಿಸಲು ಅನುಮೋದನೆ ದೊರೆತಿದ್ದು, ಘಟಕ ಸ್ಥಾಪನೆಗೆ ಇದೇ ನವೆಂಬರ್ 16ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು. ಇದರಿಂದ 1,200 ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ ಎಂದಿದ್ದಾರೆ.
ಡಿ.13ರಂದು ಗ್ರೀನ್ ಮ್ಯಾರಾಥಾನ್:
2026-27ನೇ ಸಾಲಿನ ವೃಕ್ಷೋತ್ಥಾನ ಮ್ಯಾರಾಥಾನ್ ಕಾರ್ಯಕ್ರಮವನ್ನು ಬರುವ ಡಿ.13ರಂದು ಹಮ್ಮಿಕೊಳ್ಳಲಾಗಿದ್ದು, 20 ಸಾವಿರಕ್ಕೂ ಹೆಚ್ಚು ಪರಿಸರ ಪ್ರೇಮಿಗಳು ಭಾಗವಹಿಸುತ್ತಿದ್ದು, ದೇಶದಲ್ಲಿಯೇ ಪ್ರಮುಖ ಗ್ರೀನ್ ಮ್ಯಾರಥಾನ್ ಎಂದು ಗುರುತಿಸಿಕೊಂಡಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ಶಾಲೆ ಧ್ವಂಸ, 29 ಮಂದಿ ಸಾವು
