ಚಿತ್ರದುರ್ಗ: ಚಿರತೆ ದಾಳಿಗೆ ಸಿಲುಕಿದ ರೈತನೋರ್ವ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ (Challakere) ತಾಲೂಕಿನ ದೊಡ್ಡಚಲ್ಲೂರು (Doddachalluru) ಗ್ರಾಮದ ಬಳಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಮನೆಯ ಸಮೀಪ ರೈತನ ಮೇಲೆ ಚಿರತೆ ದಾಳಿ ನಡೆಸಿದ್ದು, 65 ವರ್ಷದ ರೈತ ರಾಮಚಂದ್ರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ರೈಲ್ವೆ ಹಳಿ ಮೇಲೆ ಸ್ಫೋಟ – ತಪ್ಪಿತು ದೊಡ್ಡ ದುರಂತ
ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಮನೆ ಬಳಿ ಇದ್ದ ರೈತನ ಮೇಲೆ ಏಕಾಏಕಿ ದಾಳಿ ನಡೆಸಿದ ಚಿರತೆ, ಅವರನ್ನು ಬಲಿ ಪಡೆದಿದೆ. ಘಟನೆಯಿಂದ ದೊಡ್ಡಚಲ್ಲೂರು ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್
