ಕೊಪ್ಪಳ: ಈರುಳ್ಳಿ ತುಂಬಿದ ಲಾರಿಯೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಲಾರಿ ಚಾಲಕ ಹಾಗೂ ಕ್ಲೀನರ್ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕೊಪ್ಪಳ (Koppal) ತಾಲೂಕಿನ ಮುನಿರಾಬಾದ್ (Munirabad) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಲಾರಿ (Lorry) ಹೊಸಪೇಟೆ ಕಡೆಯಿಂದ ಕುಷ್ಟಗಿ ಕಡೆಗೆ ಈರುಳ್ಳಿ ಲೋಡ್ ಮಾಡಿಕೊಂಡು ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ. ಲಾರಿ ಬಿದ್ದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕ ಚುನಾವಣೆಯಲ್ಲಿ ಸೋಲು – ನಾನೇ ಸ್ಪರ್ಧಿಸಿದ್ದರೆ ಜಯಭೇರಿ ಬಾರಿಸುತ್ತಿದ್ದೆವು: ಟ್ರಂಪ್
ಸದ್ಯ ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಡಿಕೆಶಿ ಪುತ್ರ ಆಕಾಶ್

