ಲಕ್ನೋ: ಮುಂಬರುವ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ನೋಂದಾಯಿಸಿಕೊಂಡಿರುವ ಅರ್ಹ ಬಡ ಕುಟುಂಬಗಳಿಗೆ ದೀಪಾವಳಿ ಮತ್ತು ಹೋಳಿ ಹಬ್ಬದ ಸಂದರ್ಭದಲ್ಲಿ ತಲಾ ಒಂದು ಉಚಿತ ಎಲ್ಪಿಜಿ ಸಿಲಿಂಡರ್ (LPG Cylinder) ನೀಡುವುದಾಗಿ ಘೋಷಿಸಿದ್ದಾರೆ.
ಮಂಗಳವಾರ ರಾಜ್ಯದ 1.89 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಎಲ್ಪಿಜಿ ಸಿಲಿಂಡರ್ ಮರುಪೂರಣದ ಸಬ್ಸಿಡಿ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಈ ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಅರ್ಹ ಕುಟುಂಬಗಳಿಗೆ ಸಿಲಿಂಡರ್ ಮರುಪೂರಣದ ಸಬ್ಸಿಡಿ ನೀಡಲು ರಾಜ್ಯ ಸರ್ಕಾರ 1,500 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ. ಇದನ್ನೂ ಓದಿ: ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಅಪ್ರಸ್ತುತ: ಸುಪ್ರೀಂ ಕೋರ್ಟ್
ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಮತ್ತು ಕೇಂದ್ರ ಸರ್ಕಾರ ನೀಡುತ್ತಿರುವ ಸಬ್ಸಿಡಿ ಕುರಿತು ಮಾಹಿತಿ ನೀಡಿದರು. ಒಂದು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 983.45 ರೂಪಾಯಿ ಇದೆ. ಇದರಲ್ಲಿ ಕೇಂದ್ರ ಸರ್ಕಾರ 335 ರೂಪಾಯಿ ಸಬ್ಸಿಡಿ ನೀಡುತ್ತಿದ್ದು, ಫಲಾನುಭವಿಗಳು ತಮ್ಮ ಕಿಸೆಯಿಂದ 648.55 ರೂಪಾಯಿ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸೇತುವೆ ಮೇಲಿಂದ ಕೆಳಗೆ ಬಿದ್ದ ಈರುಳ್ಳಿ ತುಂಬಿದ ಲಾರಿ – ಚಾಲಕ, ಕ್ಲೀನರ್ ಸ್ಥಿತಿ ಚಿಂತಾಜನಕ
ಬಡ ಕುಟುಂಬಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ದೀಪಾವಳಿ ಮತ್ತು ಹೋಳಿ ಹಬ್ಬದ ಸಂದರ್ಭದಲ್ಲಿ ತಲಾ ಒಂದು ಉಚಿತ ಸಿಲಿಂಡರ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಲಿಂಡರ್ ಖರೀದಿಗೆ ಖರ್ಚು ಮಾಡಬೇಕಿದ್ದ ಹಣ ಉಳಿತಾಯವಾಗುವುದರಿಂದ ಆ ಹಣದಲ್ಲಿ ದೀಪಾವಳಿಗೆ ಸಿಹಿತಿಂಡಿ ಹಾಗೂ ಹಣತೆಗಳನ್ನು ಖರೀದಿಸಬಹುದು ಎಂದರು. ಇದನ್ನೂ ಓದಿ: ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ ಕಡಿವಾಣ – ಒಂದಕ್ಕಿಂತ ಹೆಚ್ಚು ಮದುವೆಯಾದ್ರೆ ಸರ್ಕಾರಿ ನೌಕರರಿಗೆ ಕೆಲಸದಿಂದ ಗೇಟ್ಪಾಸ್
ಇದೇ ವೇಳೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿ ಮತ್ತು ಈಗಿನ ಸರ್ಕಾರದ ಆಡಳಿತವನ್ನು ಹೋಲಿಕೆ ಮಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಒಂದು ಗ್ಯಾಸ್ ಸಂಪರ್ಕ ಪಡೆಯಲು ಜನರು ಸಾಕಷ್ಟು ತೊಂದರೆ ಅನುಭವಿಸಬೇಕಾಗಿತ್ತು. ಆದರೆ, ತಮ್ಮ ಸರ್ಕಾರ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ಒದಗಿಸಿದೆ. ಇದು ಉತ್ತಮ ಆಡಳಿತಕ್ಕೆ ಉದಾಹರಣೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಕೊಡಗಿನಲ್ಲಿ ವರುಣನ ಅಬ್ಬರ; ಮಡಿಕೇರಿ ಸುತ್ತಮುತ್ತ ಎಡೆಬಿಡದೆ ಸುರಿಯುತ್ತಿರುವ ಮಳೆ

