ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣ (KPSC Scam Case) ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಡಿಜಿಪಿ ಹಿತೇಂದ್ರ ಅವರು ಎಸ್ಐಟಿ ಮುಖ್ಯಸ್ಥರಾಗಿದ್ದಾರೆ. ಐಪಿಎಸ್ ಅಧಿಕಾರಿಗಳಾದ ಸೌಮೇಂದು ಮುಖರ್ಜಿ, ಅನೂಪ್ ಎ ಶೆಟ್ಟಿ, ಕುಶಾಲ್ ಚೌಕ್ಸಿ, ಕ್ಷಮಾ ಮಿಶ್ರಾ ಅವರು ಎಸ್ಐಟಿ ಟೀಂನಲ್ಲಿದ್ದಾರೆ.
ಹೈಕೋರ್ಟ್ ನಿರ್ದೇಶನದ ಮೇರೆಗೆ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಶೇಷ ತನಿಖಾ ತಂಡವು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ನ ನಿರ್ದೇಶನಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
