ನವದೆಹಲಿ: ಇಲ್ಲಿನ ಚಾವರಿ ಬಜಾರ್ನಲ್ಲಿರುವ (Chawri Bazaar) ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಇಬ್ಬರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇಂದು (ನ.5) ಬೆಳಿಗ್ಗೆ ಚಾವರಿ ಬಜಾರ್ ಮೆಟ್ರೋ ನಿಲ್ದಾಣದ ಬಳಿಯ ಗಲಿ ಸಿತಾರಾದಲ್ಲಿ ಬೆಳಿಗ್ಗೆ 9:50ರ ಸುಮಾರಿಗೆ ಈ ಘಟನೆಯ ನಡೆದಿದೆ ಎಂದು ವರದಿಯಾಗಿದೆ. ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಪರಿಣಾಮ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಇಂದಿನಿಂದ ಐದು ದಿನಗಳ ಅದ್ಧೂರಿ ದೀಪೋತ್ಸವ; 30 ಲಕ್ಷ ದೀಪಗಳನ್ನು ಬೆಳಗಿಸಲು ಸಿದ್ಧತೆ
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
