ನವದೆಹಲಿ: ಶಾಲೆಯಲ್ಲಿ ಆಟದ ಅವಧಿ ಮುಗಿಸಿ ತರಗತಿಗೆ ಮರಳಿದ 9 ವರ್ಷದ ಬಾಲಕಿಯೊಬ್ಬಳು (Girl) ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.
ದೆಹಲಿಯ ಮಯೂರ್ (Mayur Vihar) ವಿಹಾರ್ ಫೇಸ್-2ರ ಲವ್ಲಿ ಹೆರಿಟೇಜ್ ಶಾಲೆಯಲ್ಲಿ ಬುಧವಾರ ಈ ಘಟನೆ ಸಂಭವಿಸಿದೆ. ಮೃತ ಬಾಲಕಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿ ಆಟದ ಅವಧಿ ಮುಗಿಸಿ ತರಗತಿಗೆ ಬಂದಿದ್ದಾಳೆ. ಈ ವೇಳೆ ತನ್ನ ಎರಡೂ ಕೈಗಳನ್ನು ಸೊಂಟದ ಮೇಲಿಟ್ಟುಕೊಂಡು ಏಕಾಏಕಿ ಮುಖ ಮುಂದಕ್ಕೆ ಮಾಡಿ ನೆಲಕ್ಕೆ ಕುಸಿದು ಬಿದ್ದಿದ್ದಾಳೆ. ಈ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ದೆಹಲಿಯ ಚಾವರಿ ಬಜಾರ್ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ – ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
ಬಾಲಕಿ ಕುಸಿದು ಬೀಳುತ್ತಿದ್ದಂತೆ ತರಗತಿಯಲ್ಲಿದ್ದ ವಿದ್ಯಾರ್ಥಿಗಳು ಏನಾಯಿತು ಎಂದು ಪರಿಶೀಲಿಸಲು ಮುಂದಾಗಿದ್ದಾರೆ. ಶಿಕ್ಷಕಿಯೂ ತಕ್ಷಣ ಬಾಲಕಿಯ ಬಳಿ ಧಾವಿಸಿ ಆಕೆಯನ್ನು ಎತ್ತಿಕೊಂಡು ಉಪಚರಿಸಲು ಪ್ರಯತ್ನಿಸಿದ್ದಾರೆ. ಮುಖಕ್ಕೆ ನೀರು ಸಿಂಪಡಿಸಿ ಪ್ರಜ್ಞೆ ಮರಳಿಸಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ಶಿಕ್ಷಕಿ ಹೊರಗೆ ಓಡಿದ್ದಾರೆ. ಇದನ್ನೂ ಓದಿ: ನವೆಂಬರ್ನಲ್ಲೇ 99 ಅಡಿಗೆ ಕುಸಿದ ಕೆಆರ್ಎಸ್ ನೀರಿನ ಮಟ್ಟ
ಇತ್ತ ಶಾಲಾ ಸಿಬ್ಬಂದಿ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆ ಆಸ್ಪತ್ರೆಯಲ್ಲಿ ಬಾಲಕಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಲಾಗಿದೆ ಎನ್ನಲಾಗಿದೆ. ಬಳಿಕ ನಿರ್ಮಾಣ್ ವಿಹಾರ್ನ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಕಾಫಿನಾಡ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸವ – ಈ ಬಾರಿ ಭಕ್ತರಿಗೆ ಹೊಸ ರೂಲ್ಸ್
ಈ ಘಟನೆ ಕುರಿತು ಬೆಳಗ್ಗೆ 9:52ಕ್ಕೆ ದೆಹಲಿ ಪೊಲೀಸರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ. ಪೊಲೀಸರು ಶಾಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಶಾಲಾ ಆಡಳಿತ ಮಂಡಳಿಯ ಹೇಳಿಕೆಗಳನ್ನೂ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಟ್ರಂಪ್ಗೆ ಸೋಲು, ಷೇರುಪೇಟೆಯಲ್ಲಿ ದೀಪಾವಳಿ ಧಮಾಕ: ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಬಂಪರ್ ಲಾಭ
ಪ್ರಾಥಮಿಕ ವರದಿಗಳ ಪ್ರಕಾರ, ಬಾಲಕಿಯ ಸಾವಿಗೆ ಹೃದಯಾಘಾತ ಅಥವಾ ಹೃದಯ ಸ್ತಂಭನ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ತಿಳಿದುಬರಲಿದೆ. ಇಂದು ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಇಂದಿನಿಂದ ಐದು ದಿನಗಳ ಅದ್ಧೂರಿ ದೀಪೋತ್ಸವ; 30 ಲಕ್ಷ ದೀಪಗಳನ್ನು ಬೆಳಗಿಸಲು ಸಿದ್ಧತೆ
ಇನ್ನು ಬಾಲಕಿಗೆ ಹೃದಯ ಸ್ತಂಭನ ಸಂಭವಿಸಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಆದರೆ ಬಾಲಕಿಯ ಕುಟುಂಬಸ್ಥರು ಶಾಲೆಯ ತುರ್ತು ಚಿಕಿತ್ಸಾ ವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಪ್ರಥಮ ಚಿಕಿತ್ಸೆ ಹಾಗೂ ಸಿಪಿಆರ್ ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಳ್ಳಿಗರೆಂದರೆ ಗುಗ್ಗುಗಳಲ್ಲ ಪ್ರಿಯಾಂಕ್ ಖರ್ಗೆಗೆ ಹೆಚ್ಡಿಕೆ ಖಡಕ್ ತಿರುಗೇಟು
