ನವದೆಹಲಿ: BGS & SJB ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಪ್ರಕಾಶನಾಥ ಸ್ವಾಮೀಜಿ (Prakashanath Swamiji) ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajasthan Singh) ಅವರನ್ನು ಭೇಟಿಯಾಗಿ BGS ಉತ್ಸವ 2026 ಹಾಗೂ 18ನೇ ವರ್ಷದ ಸಂಸ್ಥಾಪಕರ ದಿನಾಚರಣೆಗೆ ಆಹ್ವಾನ ನೀಡಿದರು.
ನವೆಂಬರ್ 27ರಂದು ಮಧ್ಯಾಹ್ನ 2 ಗಂಟೆಗೆ ಕೆಂಗೇರಿಯ BGS ಹೆಲ್ತ್ & ಎಜುಕೇಶನ್ ಸಿಟಿಯಲ್ಲಿ ಎರಡು ದಿನಗಳ BGS ಉತ್ಸವ, ಫೌಂಡರ್ಸ್ ಡೇ ಮತ್ತು ಕಲ್ಚರಲ್ ಫೆಸ್ಟ್ ನಡೆಯಲಿದೆ. ಇದೇ ಸಂದರ್ಭದಲ್ಲಿ 800 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮವೂ ಜರುಗಲಿದೆ. ಇದನ್ನೂ ಓದಿ: ಗಾಳಿ, ನೀರಿನಲ್ಲಿ ಬಸ್ ಓಡಿಸೋಕೆ ಆಗಲ್ಲ: ಪ್ರಿಯಾಂಕ್ ಖರ್ಗೆ
ಕಾರ್ಯಕ್ರಮಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸುವ ನಿರೀಕ್ಷೆಯಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ನವೆಂಬರ್ 27ರಂದು ಭಾಗವಹಿಸಲಿದ್ದಾರೆ. ನವೆಂಬರ್ 28ರಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಉಪರಾಷ್ಟ್ರಪತಿಗಳನ್ನೂ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸುವ ಉದ್ದೇಶವಿದೆ ಎಂದು ಸ್ವಾಮೀಜಿ ತಿಳಿಸಿದರು.ಇದನ್ನೂ ಓದಿ: ಕುಮಾರಸ್ವಾಮಿ ಹಳ್ಳಿಗುಗ್ಗು ಎಂದಿದ್ದು ಆಡುಭಾಷೆ: ಪ್ರಿಯಾಂಕ್ ಖರ್ಗೆ ಸಮರ್ಥನೆ

ಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರು ನಿರ್ಮಿಸಿದ ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳು, ಪೂಜ್ಯ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಹಾಗೂ ಡಾ.ಪ್ರಕಾಶನಾಥ ಸ್ವಾಮೀಜಿಯವರ ಸಾರಥ್ಯದಲ್ಲಿ ಮುನ್ನಡೆಯುತ್ತಿವೆ.


ಸಂಸ್ಥೆಯಲ್ಲಿ ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವೈದ್ಯಕೀಯ ಸಿಬ್ಬಂದಿಯನ್ನು ಗುರುತಿಸಿ, ಅವರಿಗೆ ‘ಸೇವಾರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಎರಡು ದಿನಗಳ ಈ ಬೃಹತ್ ಉತ್ಸವದಲ್ಲಿ ಸುಮಾರು 25 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಯವರು ಶಿಕ್ಷಣ, ಆರೋಗ್ಯ ಮತ್ತು ಸಮಾಜಸೇವೆಯ ಕ್ಷೇತ್ರಗಳಲ್ಲಿ ಸಲ್ಲಿಸಿದ ಮಹೋನ್ನತ ಸೇವೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ ಎಂದು ಡಾ. ಪ್ರಕಾಶನಾಥ ಸ್ವಾಮೀಜಿ ತಿಳಿಸಿದರು.ಇದನ್ನೂ ಓದಿ: ವಿಜಯಲಕ್ಷ್ಮಿ–ಧನ್ವೀರ್ ಜಟಾಪಟಿ ಕೇಸ್ – ನ.12ಕ್ಕೆ ವಿಚಾರಣೆಗೆ ಹಾಜರಾಗುವಂತೆ ಧನ್ವೀರ್ಗೆ ಸೂಚನೆ














