– ಕನ್ನಡಪರ ಸಂಘಟನೆಗಳಿಂದ ವಿರೋಧ
ಬೆಂಗಳೂರು: ನಮ್ಮ ಮೆಟ್ರೋ ಪಿಂಕ್ ಲೈನ್ನಲ್ಲಿ (Pink Line Metro) ಬರುವ ಕಾಡುಗೊಂಡನಹಳ್ಳಿ ನಿಲ್ದಾಣಕ್ಕೆ ‘ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕೆಂದು ಕೋರಿ ಸಚಿವ ಜಮೀರ್ ಅಹ್ಮದ್ (Zameer Ahmed)
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಅವರಿಗೆ ಮನವಿ ಮಾಡಿದ್ದಾರೆ.
ಜಮೀರ್ ಅವರ ಈ ಮನವಿಗೆ ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಪ್ರದೇಶದ ಐತಿಹಾಸಿಕ ಮತ್ತು ಭೌಗೋಳಿಕ ಗುರುತನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಈ ಹೆಸರನ್ನು ಪರಿಗಣಿಸುವಂತೆ ಜಮೀರ್ ಅಹ್ಮದ್ ಆಗ್ರಹಿಸಿದ್ದಾರೆ.
ಸಚಿವರ ಮನವಿಯನ್ನು ಪ್ರಶ್ನಿಸಿರುವ ಕನ್ನಡಪರ ಸಂಘಟನೆಗಳು, ಬೇಕಾದರೆ ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಕನ್ನಡ ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ರಂಜಾನ್ ಸಾಬ್ ಅವರ ಹೆಸರನ್ನು ಇಡಿ ಎಂದು ಸಲಹೆ ನೀಡಿವೆ.ಇದನ್ನೂ ಓದಿ: ಪ್ರೋಟೋಕಾಲ್ ವಿಚಾರಕ್ಕೆ ಸಿಬ್ಬಂದಿ ಜೊತೆ ವಾಗ್ವಾದ – ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆ ಕೇಳಿದ ಹಾಸನ ಡಿಸಿ
A representation was submitted to the Hon’ble Chief Minister Shri @DKShivakumar today, requesting that the proposed Kadugondanahalli Metro Station on Namma Metro’s Pink Line be renamed “Arabic College Metro Station.”
The request seeks to reflect the geographical identity and local significance of the area through an appropriate station name.
Former Minister Shri @BNagendraINC and HESCOM Chairman Janab Azzam peer Khadri were present on the occasion.
ನಮ್ಮ ಮೆಟ್ರೋದ ಪಿಂಕ್ ಲೈನ್ನಲ್ಲಿರುವ ಪ್ರಸ್ತಾವಿತ ಕಾಡುಗೊಂಡನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬದಲಾಗಿ ‘ಅರೇಬಿಕ್ ಕಾಲೇಜು ಮೆಟ್ರೋ ನಿಲ್ದಾಣ’ ಎಂದು ಮರುನಾಮಕರಣ ಮಾಡುವಂತೆ ಕೋರಿ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸ್ಥಳೀಯ ಪ್ರದೇಶದ ಐತಿಹಾಸಿಕ ಮತ್ತು ಭೌಗೋಳಿಕ ಗುರುತನ್ನು ಪ್ರತಿಬಿಂಬಿಸುವ ನಿಟ್ಟಿನಲ್ಲಿ ಈ ಹೆಸರನ್ನು ಪರಿಗಣಿಸುವಂತೆ ಮನವಿಯಲ್ಲಿ ಕೋರಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಬಿ. ನಾಗೇಂದ್ರ ಹಾಗೂ ಹೆಸ್ಕಾಂ ಅಧ್ಯಕ್ಷರಾದ ಜನಾಬ್ ಅಜ್ಜಂಪೀರ್ ಖಾದ್ರಿ ಉಪಸ್ಥಿತರಿದ್ದರು.
@INCKarnataka
— B Z Zameer Ahmed Khan (@BZZameerAhmedK) November 4, 2026
ಇನ್ನು ಇದೇ ನವೆಂಬರ್ 13 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಿಂಕ್ ಮೆಟ್ರೋ ಮಾರ್ಗವನ್ನು (Metro Pink Line) ಉದ್ಘಾಟಿಸಲಿದ್ದಾರೆ. ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಕೆಲವೇ ದಿನಗಳಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ.ಇದನ್ನೂ ಓದಿ: ಉಡುಪಿ ಬಾಳೆಕುದ್ರು ಮಠಾಧೀಶರು ನಾಪತ್ತೆ – ಮಠದ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪ
