ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ಅವರು ನಾಳೆ ಸಂಜೆ ದೆಹಲಿಗೆ ಭೇಟಿ ನೀಡಲಿದ್ದಾರೆ.
ಈಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಸಿಎಂ ಡಿಕೆಶಿ ಕೂಡ ರಾಹುಲ್ ಭೇಟಿಯಾಗುವ ಸಾಧ್ಯತೆ ಇದೆ.
ನಾಳೆ ಸಂಜೆ ಪಕ್ಷದ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ. ಪಕ್ಷದ ಪಿಸಿಸಿ ಅಧ್ಯಕ್ಷರು, ಸಿಎಲ್ಪಿ ನಾಯಕರು ಹಾಗೂ ಪಕ್ಷದ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಶುಕ್ರವಾರ ಸಂಜೆ ರಾಹುಲ್ ಗಾಂಧಿ ಟೀ ಪಾರ್ಟಿಯಲ್ಲಿ ಸಿಎಂ ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿ ಪ್ರತ್ಯೇಕ ಭೇಟಿ ಮಾತುಕತೆಗೆ ಇದುವರೆಗೆ ಯಾವುದೇ ಸಮಯ ನಿಗದಿ ಆಗಿಲ್ಲ. ದೀಪಾವಳಿ ಹಬ್ಬದ ಪ್ರಯುಕ್ತ ಪಕ್ಷದ ನಾಯಕರಿಗೆ ಟೀ ಪಾರ್ಟಿ ಆಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
