ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು (Bengaluru) ಮತ್ತು ಬೆಳಗಾವಿ (Belagavi) ನಡುವೆ ವಿಶೇಷ ರೈಲು ಸಂಚರಿಸಲಿವೆ.
ಬೆಂಗಳೂರು ಹಾಗೂ ಬೆಳಗಾವಿ ನಡುವೆ ನ.7ರಿಂದ 10ರವರೆಗೆ ವಿಶೇಷ ರೈಲು ಸಂಚರಿಸಲಿವೆ. ಹಬ್ಬದ ಹಿನ್ನೆಲೆ ಬೆಂಗಳೂರಿನಿಂದ ಬೆಳಗಾವಿಗೆ ಎರಡು ಟ್ರಿಪ್ ಹಾಗೂ ಬೆಳಗಾವಿಯಿಂದ ಬೆಂಗಳೂರಿಗೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ನಡೆಸಲಿವೆ. ಈ ವಿಶೇಷ ರೈಲು ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ ಹಾಗೂ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸಲಿದೆ. ಇದನ್ನೂ ಓದಿ: ಕೆಎಸ್ಆರ್ಟಿಸಿ ಪಾಸ್ ದರವೂ ಭಾರೀ ಏರಿಕೆ: ಗ್ರಾಮಾಂತರ, ನಗರ ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಶಾಕ್
ಬೆಂಗಳೂರಿನಿಂದ ಹೊರಡುವ ರೈಲು ನವೆಂಬರ್ 7 ಮತ್ತು 9ರಂದು ರಾತ್ರಿ 7 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 8:25ಕ್ಕೆ ಬೆಳಗಾವಿ ತಲುಪಲಿದೆ. ಹಾಗೆಯೇ ಬೆಳಗಾವಿಯಿಂದ ನವೆಂಬರ್ 8 ಮತ್ತು 10ರಂದು ಸಂಜೆ 5:30ಕ್ಕೆ ರೈಲು ಹೊರಟು, ಮರುದಿನ ಬೆಳಗ್ಗೆ 5 ಗಂಟೆಗೆ ಬೆಂಗಳೂರನ್ನು ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ ಮತ್ತು ಧಾರವಾಡ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
