ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಮೂವರ ಶೂಟೌಟ್ ಪ್ರಕರಣ (Chamarajanagara Shootout Case) ತನಿಖೆ ವಿಳಂಬವಿಲ್ಲ. ಮಧ್ಯ ಪ್ರವೇಶ ಮಾಡಲ್ಲ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದರು.
ಹನೂರು ತಾಲೂಕಿನ ಕಾವೇರಿ ಅರಣ್ಯ ಪ್ರದೇಶದಲ್ಲಿ ನಡೆದ ಮೂವರು ಬೇಟೆಗಾರರ ಶೂಟೌಟ್ ಪ್ರಕರಣ ಸಂಬಂಧ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಸಿಒಡಿ ತನಿಖೆ ನಡೆಯುತ್ತಿದೆ. ನಾವು ಅದರಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ತನಿಖೆಯಲ್ಲಿ ಯಾವುದೇ ವಿಳಂಬವಾಗುತ್ತಿಲ್ಲ ಎಂದರು. ಇದನ್ನೂ ಓದಿ: ಚಾಮರಾಜನಗರ ಶೂಟೌಟ್ ಕೇಸ್ – ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಮಂಜೂರು
ಧ್ವಂಸಗೊಂಡಿರುವ ಕಳ್ಳಬೇಟೆ ತಡೆ ಶಿಬಿರ, ಅರಣ್ಯ ವಸತಿ ಗೃಹಗಳ ದುರಸ್ತಿಗೆ ಕ್ರಮ ವಹಿಸಲಾಗಿದೆ. ಆದ್ದರಿಂದ ಅರಣ್ಯ ಸಿಬ್ಬಂದಿ ಭಯಪಡುವ ಅಗತ್ಯ ಇಲ್ಲ. ಧೈರ್ಯವಾಗಿ ಕರ್ತವ್ಯ ನಿರ್ವಹಿಸಬಹುದು ಎಂದು ಭರವಸೆ ನೀಡದರು.
ಕಣಿಯನಪುರ ಕಾರಿಡಾರ್ ವ್ಯಾಪ್ತಿಯಲ್ಲಿ ಖಾಸಗಿ ಜಮೀನುಗಳಿದ್ದರೆ ಸ್ವಾಧೀನಪಡಿಸಿಕೊಳ್ಳಲು ಕ್ರಮವಹಿಸಲಾಗಿದೆ. ಇನ್ನೂ ಕ್ರಮವಾಗಿ ಬಂದೂಕನ್ನು ಯಾರೂ ಇಟ್ಟುಕೊಳ್ಳುವಂತಿಲ್ಲ. ಪರವಾನಗಿ ಇಲ್ಲದಿದ್ದಲ್ಲಿ ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದಲ್ಲಿ ಅಂತಹವರ ಮೇಲೆ ಕ್ರಮವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹನೂರು ಶೂಟೌಟ್ ಕೇಸ್ | ಹತ್ತಿರದಿಂದಲೇ ಗುಂಡು – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?
