ದಾವಣಗೆರೆ: 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಚಿಕ್ಕಪ್ಪನೇ ಅತ್ಯಾಚಾರಗೈದಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿಯ ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: E20 ಈಗ 420 ಆಗಿದೆ, ಜನರ ವಾಹನಗಳ ಪೆಟ್ರೋಲ್ ಕದಿಯಲಾಗುತ್ತಿದೆ – ಮೋದಿ ಸರ್ಕಾರದ ವಿರುದ್ಧ ರಾಗಾ ಕಿಡಿ
ಚಿಕ್ಕಪ್ಪ ಪುಸಲಾಯಿಸಿ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
