ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ (PG Medical Course) ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ.
ಈ ಸುತ್ತಿನಲ್ಲಿ ಒಟ್ಟು 4,388 ಸೀಟುಗಳ ಪೈಕಿ 3,268 ಸೀಟು ಹಂಚಿಕೆಯಾಗಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಇದನ್ನೂ ಓದಿ: E20 ಈಗ 420 ಆಗಿದೆ, ಜನರ ವಾಹನಗಳ ಪೆಟ್ರೋಲ್ ಕದಿಯಲಾಗುತ್ತಿದೆ – ಮೋದಿ ಸರ್ಕಾರದ ವಿರುದ್ಧ ರಾಗಾ ಕಿಡಿ
ಸೀಟು ಹಂಚಿಕೆಯಾದವರು ನ.11ರವರೆಗೆ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಚಾಯ್ಸ್- 1 ಮತ್ತು 2 ದಾಖಲಿಸಿದವರು ನ.11ರವರೆಗೆ ಚಲನ್ ಡೌನ್ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ನ.12ರೊಳಗೆ ಶುಲ್ಕ ಪಾವತಿಸಬೇಕು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ತನಿಖೆ ಮುಗಿದು ಕೆಪಿಎಸ್ಸಿ ಸುಧಾರಣೆ ಆಗೋವರೆಗೂ KAS ಪರೀಕ್ಷೆ ಬೇಡ: ಹೆಚ್ಡಿಕೆ ಆಗ್ರಹ
ಚಾಯ್ಸ್-1 ದಾಖಲಿಸಿದವರು, ಶುಲ್ಕ ಪಾವತಿ ನಂತರ ನ.13ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಿದ ನಂತರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು, ನ.14ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ
