ಲಕ್ನೋ: ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್ (Ghaziabad) ಜಿಲ್ಲೆಯ ಮೋದಿನಗರದ ಸಿಕ್ರಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ಕಾಂಕ್ರೀಟ್ ಸ್ಲ್ಯಾಬ್ ಕುಸಿದು (Concrete Slab Collapse) ಓರ್ವ ಕಾರ್ಮಿಕ ಮೃತಪಟ್ಟಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ ಐವರು ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೂರೂವರೆ ತಿಂಗಳಿಂದ ಆಸ್ಪತ್ರೆಯಲ್ಲಿರುವ ಮಗುವಿನ ಜವಾಬ್ದಾರಿ ಕ್ಲೌಡ್ ನೈನ್ ಆಸ್ಪತ್ರೆ ಹೊರಬೇಕು: ಹೆಚ್ಡಿಕೆ
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೋದಿನಗರ ಶಾಸಕ ಮಂಜು ಶಿವಾಚ್, ಇದು ಅತ್ಯಂತ ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ. ಸ್ಲ್ಯಾಬ್ಗೆ ಕಾಂಕ್ರೀಟ್ ಹಾಕುವ ವೇಳೆ ಈ ಅವಘಡ ಸಂಭವಿಸಿದೆ. ಶಟರಿಂಗ್ ಸ್ಥಳಾಂತರಗೊಂಡಿದ್ದರಿಂದ ಸ್ಲ್ಯಾಬ್ ಕುಸಿದಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ 50,000 ರೂ. ಧನಸಹಾಯ ನೀಡಲು ಮುಂದಾದ ಯೋಗಿ ಸರ್ಕಾರ – ಅಖಿಲೇಶ್ 40 ಸಾವಿರ ಘೋಷಣೆ ಬೆನ್ನಲ್ಲೇ ಕೌಂಟರ್
ದೀಪಾವಳಿ ದಿನವೂ ದಿನಗೂಲಿ ಸಂಪಾದನೆಯ ನಿರೀಕ್ಷೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆರರಿಂದ ಏಳು ಕಾರ್ಮಿಕರು ಸ್ಥಳದಲ್ಲಿದ್ದಾಗ ಸ್ಲ್ಯಾಬ್ ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ ಎಂದು ಶಾಸಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಿದ್ಯುತ್ ಶಾಕ್ನಿಂದ 13 ವರ್ಷದ ಕಾಡಾನೆ ಸಾವು – ಜಮೀನು ಮಾಲೀಕನಿಂದ ತಪ್ಪೊಪ್ಪಿಗೆ
ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಐವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: ಪಿಜಿ ವೈದ್ಯಕೀಯ; ಮೊದಲ ಸುತ್ತಿನ ಫಲಿತಾಂಶ ಪ್ರಕಟ, 3,268 ಸೀಟು ಹಂಚಿಕೆ: ಕೆಇಎ
ಈ ಕುರಿತು ಮಾತನಾಡಿದ ಡಿಸಿಪಿ (ಗ್ರಾಮೀಣ) ಸುರೇಂದ್ರನಾಥ್ ತಿವಾರಿ, ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಅವಶೇಷಗಳಡಿ ಯಾರೂ ಉಳಿದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇದೇ ಮೊದಲ ಬಾರಿಗೆ ಡಿ.12 ರಂದು ಅಯೋಧ್ಯೆಗೆ ಅಖಿಲೇಶ್ ಯಾದವ್ ಭೇಟಿ
ಇನ್ನು ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ಅಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ನಿರ್ಮಾಣ ಹಂತದ ಎಕ್ಸ್ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ – ನಾಲ್ವರು ಯುವಕರು ದುರ್ಮರಣ
