ತಿರುವನಂತಪುರಂ: ಗೌರಿ ಲಂಕೇಶ್ (Gauri Lankesh), ಎಂ.ಎಂ.ಕಲಬುರ್ಗಿ (M.M.Kalburgi) ಹತ್ಯೆ ಹಿಂದೆ ಸಂಘ ಪರಿವಾರದವರ ಕೈವಾಡವಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಗಂಭೀರ ಆರೋಪ ಮಾಡಿದ್ದಾರೆ.
ಕೇರಳದ ಎರ್ನಾಕುಲಂನಲ್ಲಿ ನಡೆದ ಮುಸ್ಲಿಂ ಯೂತ್ ಲೀಗ್ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಖರ್ಗೆ, ಮುಂದಿನ 6 ತಿಂಗಳಲ್ಲಿ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗುವುದು. ಪ್ರಕರಣಗಳ ತನಿಖೆ ಮತ್ತು ಕ್ರಮಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಈ ಹತ್ಯೆಗಳ ಹಿಂದೆ ಸಂಘಕ್ಕೆ ಸಂಬಂಧಿಸಿದ ವ್ಯಕ್ತಿಗಳಿದ್ದಾರೆ. ರಾಜ್ಯ ಸರ್ಕಾರವು ತನಿಖೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಮಾತನಾಡಿದ್ದಾರೆ.
