– ಶಾಂತಿಯುತ ಪರಿಹಾರಕ್ಕಾಗಿ ನೆರವು ನೀಡಲು ಭಾರತ ಸದಾ ಸಿದ್ಧ ಎಂದ ಪ್ರಧಾನಿ
ನವದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಅವರೊಂದಿಗೆ ಫೋನ್ ಕಾಲ್ನಲ್ಲಿ ಮಾತುಕತೆ ನಡೆಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಜೊತೆಗೆ ಸಂಘರ್ಷ ನಿಲ್ಲಿಸಿ ಶಾಂತಿ ಸ್ಥಾಪನೆಗೆ ಮನವಿ ಮಾಡಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ (Russia Ukraine war) ಕೊನೆಗೊಳಿಸಲು ಶಾಂತಿಯುತ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಭಾರತವು ಮತ್ತೊಮ್ಮೆ ಒತ್ತಿಹೇಳಿದ್ದಾರೆ.
2022ರ ಫೆಬ್ರವರಿಯಲ್ಲಿ ಆರಂಭವಾದ ಈ ಸಂಘರ್ಷ ಶಾಂತಿಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲು ಭಾರತ ಸಿದ್ಧವಾಗಿದೆ. ಸಂಘರ್ಷವನ್ನ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ (PM Modi) ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ, ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ಝೆಲೆನ್ಸ್ಕಿ ಮಾಹಿತಿ ಹಂಚಿಕೊಂಡರು.
Glad to have had a productive telephone conversation with President Zelenskyy. We reviewed our wide-ranging bilateral cooperation and agreed to further strengthen India-Ukraine ties.
I thanked President Zelenskyy for sharing his perspectives on the ongoing conflict, its humanitarian aspects and various efforts to restore peace. Reiterated India’s firm commitment to contributing in every possible way towards a peaceful resolution.
@ZelenskyyUA
— Narendra Modi (@narendramodi) November 9, 2026
ಅಲ್ಲದೇ ಉಭಯ ದೇಶಗಳ ಜನರ ಪರಸ್ಪರ ಹಿತಾಸಕ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಭಾರತ-ಉಕ್ರೇನ್ ದ್ವಿಪಕ್ಷೀಯ ಸಹಕಾರವನ್ನ ಇನ್ನಷ್ಟು ಬಲಪಡಿಸುವ ಕ್ರಮಗಳ ಬಗ್ಗೆಯೂ ಇಬ್ಬರೂ ನಾಯಕರು ಚರ್ಚಿಸಿದರು ಎಂದು ಪ್ರಧಾನ ಮಂತ್ರಿಗಳ ಕಚೇರಿ (PMO) ತಿಳಿಸಿದೆ.
ಉಕ್ರೇನ್ನಲ್ಲಿ ಯುದ್ಧ ಆರಂಭ ಆದಾಗಿನಿಂದಲೂ ಭಾರತ ಉಕ್ರೇನ್ ಮತ್ತು ರಷ್ಯಾ ದೇಶಗಳ ನಾಯಕರೊಂದಿಗೆ ಸಂಪರ್ಕದಲ್ಲಿದೆ. 21ನೇ ಶತಮಾನವು ಯುದ್ಧದ ಯುಗವಲ್ಲ, ಉಭಯ ರಾಷ್ಟ್ರಗಳ ನಡುವಿನ ಎಲ್ಲ ಸಮಸ್ಯೆಗಳನ್ನ ಮಾತುಕತೆ ಹಾಗೂ ರಾಜತಾಂತ್ರಿಕತೆಯ ಮೂಲಕ ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹಲವು ಬಾರಿ ಪ್ರತಿಪಾದಿಸಿದ್ದಾರೆ.
ಸೆಪ್ಟೆಂಬರ್ನಲ್ಲಿ ನಡೆದ ಬ್ರಿಕ್ಸ್ (BRICS) ಶೃಂಗಸಭೆಯ ಸಂದರ್ಭದಲ್ಲಿಯೂ, ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಉಕ್ರೇನ್ ಯುದ್ಧದ ಜೊತೆಗೆ, ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಕುರಿತಾಗಿಯೂ ಚರ್ಚೆ ನಡೆಸಿದ್ದರು. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ಮಾತನಾಡಿದ್ದ ಪ್ರಧಾನಿ ಮೋದಿ, ಉಕ್ರೇನ್ ಮತ್ತು ರಷ್ಯಾ ನಡುವೆ ಮಧ್ಯಸ್ಥಿಕೆ ವಹಿಸಲು ಭಾರತ ಸಿದ್ಧವಿದೆ ಎಂದು ಹೇಳಿದ್ದರು. ನಂತರ, ರಷ್ಯಾವು ಪ್ರಧಾನಿ ಮೋದಿಯವರ ಈ ಪ್ರಸ್ತಾಪವನ್ನ ಸ್ವಾಗತಿಸಿತು ಮತ್ತು ಭಾರತದ ನಿಲುವಿಗಾಗಿ ಧನ್ಯವಾದ ಅರ್ಪಿಸಿತು.

