ಹ್ಯಾಮಿಲ್ಟನ್: ಇಲ್ಲಿನ ಸೆಡ್ಡನ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆಯಬೇಕಿದ್ದ ಭಾರತ vs ನ್ಯೂಜಿಲೆಂಡ್ ನಡುವಿನ 3ನೇ ಏಕದಿನ ಪಂದ್ಯವು ಮಳೆಯಿಂದಾಗಿ ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿದೆ.
ಆರಂಭದಲ್ಲಿ ಮಳೆಯಿಂದಾಗಿ ಟಾಸ್ ವಿಳಂಬವಾಗಿತ್ತು. ಆದ್ದರಿಂದ 10 ಓವರ್ ಕಡಿತಗೊಳಿಸಿ ತಲಾ 40 ಓವರ್ಗಳ ಪಂದ್ಯ ನಡೆಸಲು ನಿರ್ಧರಿಸಲಾಗಿತ್ತು. ಭಾರತೀಯ ಕಾಲಮಾನದಂತೆ ಬೆಳಗ್ಗೆ 9 ಗಂಟೆಗೆ ಟಾಸ್ ನಡೆದಿತ್ತು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಬೆಳಗ್ಗೆ 9:30 ರಿಂದ ಪಂದ್ಯ ಶುರುವಾಗಬೇಕಿತ್ತು. ಆದ್ರೆ ಟಾಸ್ ಬಳಿಕವೂ ಮಳೆ ಕಾಟ ಶುರುವಾಯಿತು.
ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದ ಕಾರಣ ಪಂದ್ಯವನ್ನು ಯಾವುದೇ ಫಲಿತಾಂಶವಿಲ್ಲದೇ ರದ್ದುಗೊಳಿಸಲಾಗಿತು. ಸದ್ಯ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ. ಇನ್ನೆರಡು ಪಂದ್ಯಗಳು ಬಾಕಿಯಿದ್ದು, ಭಾರತ ಸರಣಿ ಗೆಲ್ಲಲ್ಲು, ಪಂದ್ಯ ಗೆಲ್ಲಬೇಕಿದೆ.
ಇಂದು ಉಭಯ ತಂಡಗಳ ಪ್ಲೇಯಿಂಗ್-11 ಹೇಗಿತ್ತು?
ಟೀಂ ಇಂಡಿಯಾ
ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಮನ್ ಧೀರ್, ಅನ್ಶುಲ್ ಕಾಂಬೋಜ್, ಅರ್ಷ್ದೀಪ್ ಸಿಂಗ್, ಔಕಿಬ್ ನಬಿ, ಗುರ್ನೂರ್ ಬ್ರಾರ್.
ನ್ಯೂಜಿಲೆಂಡ್
ವಿಲ್ ಯಂಗ್, ಟಿಮ್ ಸೈಫರ್ಟ್, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜಾಕೋಬ್ ಡಫ್ಫಿ.

