ಬೆಂಗಳೂರು: ಸಿಲಿಕಾನ್ ಸಿಟಿಯ ವಿಜಯನಗರದಲ್ಲಿ ನಮ್ಮ ಮೆಟ್ರೋ (Namma Metro) ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ನೇರಳೆ ಮಾರ್ಗ ವಿಜಯನಗರದಲ್ಲಿ ಮೆಟ್ರೋ ಹಳಿಗೆ ವ್ಯಕ್ತಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ಪ್ರಕರಣದ ಪರಿಣಾಮ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ.
ಘಟನೆಯಿಂದ ನೇರಳೆ ಮಾರ್ಗದಲ್ಲಿ ರೈಲು ಸೇವೆಯಲ್ಲಿ ಕೆಲಕಾಲ ವಿಳಂಬವಾಯಿತು. ವ್ಯಕ್ತಿ ರಕ್ಷಣೆ ಬಳಿಕ ಮತ್ತೆ ರೈಲು ಸಂಚಾರ ಆರಂಭವಾಗಿದೆ.
