ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ (Raghavendra Swamy) ಮಠದ ಅಕ್ಟೋಬರ್ – ನವೆಂಬರ್ ತಿಂಗಳಿನ 19 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 19 ದಿನದಲ್ಲಿ 2.79 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಪ್ರತಿ ತಿಂಗಳಿನಂತೆ ಈ ಬಾರಿಯೂ ಭಕ್ತರ ದಂಡು ಮಠಕ್ಕೆ ಹರಿದು ಬಂದಿದ್ದು, ಭಾರೀ ಪ್ರಮಾಣದ ಕಾಣಿಕೆ ಸಂಗ್ರವಾಗಿದೆ. ಗುರುರಾಘವೇಂದ್ರ ಸ್ವಾಮಿ ಮಠಕ್ಕೆ 19 ದಿನಗಳಲ್ಲೇ ಕೋಟ್ಯಾಂತರ ರೂ. ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 2 ಕೋಟಿ 68 ಲಕ್ಷ 66,655 ರೂ. ಕರೆನ್ಸಿ ನೋಟುಗಳು. 7 ಲಕ್ಷ 96,300 ರೂಪಾಯಿ ನಾಣ್ಯಗಳು ಸಂಗ್ರಹವಾಗಿವೆ. 49 ಗ್ರಾಂ ಚಿನ್ನ, 680 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ, ಕೃಷ್ಣ ಬೈರೇಗೌಡ ಕಿಡಿ
ಮಂತ್ರಾಲಯ ರಾಯರ ಮಠದಲ್ಲಿ ಅತೀ ಭದ್ರತೆಯಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು, ಶ್ರೀಮಠದ ಅಧಿಕಾರಿಗಳು ಹುಂಡಿ ಎಣಿಕೆ ವೇಳೆ ಹಾಜರಿದ್ದರು.
