ನವದೆಹಲಿ: ಆಮ್ ಆದ್ಮಿ ಪಾರ್ಟಿಯ (AAP) ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಜೀವ ಬೆದರಿಕೆ ಬಂದಿದ್ದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಹೆಸರಲ್ಲಿ ವ್ಯಕ್ತಿಯೋರ್ವ 7 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾನೆ.
ವರದಿಗಳ ಪ್ರಕಾರ, ನ.6ರಂದು ವ್ಯಕ್ತಿಯೋರ್ವ ಕರೆ ಮಾಡಿ ತಾನು ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯ. ನನಗೆ 7 ಕೋಟಿ ರೂ. ಕೊಡಿ, ಇಲ್ಲದಿದ್ದರೆ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಮಗಳನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಖಾಕಿ ಪಡೆ ಸನ್ನದ್ಧ – 7 ಸಾವಿರ ಪೊಲೀಸರ ನಿಯೋಜನೆಗೆ ಭರ್ಜರಿ ಸಿದ್ಧತೆ
ವ್ಯಕ್ತಿ ಎಎಪಿ ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ (MLA Jarnail Singh) ಅವರಿಗೆ ಕರೆ ಮಾಡಿ, ಜೊತೆಗೆ ವಾಟ್ಸಾಪ್ ಮೂಲಕ ಮೆಸೇಜ್ ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಕೂಡಲೇ ಶಾಸಕ ಜರ್ನೈಲ್ ಸಿಂಗ್ ಅವರು ಮೊಹಾಲಿ (Mohali) ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.
ದೂರಿನ ಆಧಾರದ ಮೇಲೆ, ಮೊಹಾಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಮಾಹಿತಿ ತಂತ್ರಜ್ಞಾನ (IT Act) ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ತನಿಖೆಯನ್ನು ಸೈಬರ್ ಕ್ರೈಮ್ ಪೊಲೀಸ್ ಸ್ಟೇಷನ್ನ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ವಹಿಸಲಾಗಿದೆ.ಇದನ್ನೂ ಓದಿ: ನಾಳೆ ಬೆಂಗಳೂರಿಗೆ ಮೋದಿ ಭೇಟಿ – ಹಲವೆಡೆ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳ ಪ್ರಕಟ
