ರಾಮನಗರ: ಬಿಡದಿ ಟೌನ್ಶಿಪ್ (Bidadi Township) ಯೋಜನೆಗೆ ಸಂಬಂಧಿಸಿದಂತೆ ತೀವ್ರ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (GBDA) ರಾಜ್ಯ ಸರ್ಕಾರ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಪುತ್ರ ಎಲ್.ಚಂದ್ರಶೇಖರ್ರನ್ನು ಜಿಬಿಡಿಎ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಗಾಣಕಲ್ ನಟರಾಜ್ ಸ್ಥಾನಕ್ಕೆ ಚಂದ್ರಶೇಖರ್ ರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ವಿಡಿಯೋ ಕಾನ್ಫರೆನ್ಸ್ನಲ್ಲಿ ಪರಸ್ಪರ ಯೋಗ ಕ್ಷೇಮ ವಿಚಾರಿಸಿಕೊಂಡ ಸುಬ್ಬಾ – ಸುಬ್ಬಿ!
ಬಿಡದಿ ಟೌನ್ಶಿಪ್ ಯೋಜನೆಯ ವಿಚಾರದಲ್ಲಿ ಜಿಬಿಡಿಎ ಸಾಕಷ್ಟು ವಿವಾದಕ್ಕೀಡಾಗಿತ್ತು. ಇದೀಗ ಯೋಜನೆ ವ್ಯಾಪ್ತಿಯ ಎಲ್ಲಾ ಕಂದಾಯ ಗ್ರಾಮಗಳ ಅಂತಿಮ ಅಧಿಸೂಚನೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ, ಸರ್ಕಾರ ಪ್ರಾಧಿಕಾರದ ಅಧ್ಯಕ್ಷರನ್ನು ಬದಲಾವಣೆ ಮಾಡಿರುವುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಖಾಕಿ ಯಡವಟ್ಟು, ನರಕ ಕಂಡ ನಿರಪರಾಧಿ – ಕೊಲೆಯಾದ ಮಹಿಳೆ ಜೀವಂತ ಪ್ರತ್ಯಕ್ಷ
